ಕರ್ನಾಟಕ

karnataka

ETV Bharat / city

ಧಾರವಾಡ: ಹೂ ನೀಡಿ ಪುಟಾಣಿಗಳನ್ನು ಸ್ವಾಗತಿಸಿದ ಡಿಸಿ - ಅಂಗನವಾಡಿ, ಎಲ್.ಕೆ.ಜಿ ಹಾಗೂ ಯುಕೆಜಿ ತರಗತಿ ಆರಂಭ

ಕೊರೊನಾ ಹಿನ್ನೆಲೆ ಸ್ಥಗಿತಗೊಂಡಿದ್ದ ಅಂಗನವಾಡಿ, ಎಲ್.ಕೆ.ಜಿ ಹಾಗೂ ಯುಕೆಜಿ ತರಗತಿಗಳು ಇಂದಿನಿಂದ ಪ್ರಾರಂಭಗೊಂಡಿದ್ದು, ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ್​ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಹೂವು ನೀಡುವ ಮೂಲಕ ಮಕ್ಕಳನ್ನು ಸ್ವಾಗತಿಸಿದರು.

dharwad dc
dharwad dc

By

Published : Nov 8, 2021, 2:18 PM IST

ಧಾರವಾಡ: ಇಂದಿನಿಂದ ಅಂಗನವಾಡಿ, ಎಲ್.ಕೆ.ಜಿ ಹಾಗೂ ಯುಕೆಜಿ ತರಗತಿಗಳು ಆರಂಭಗೊಂಡಿವೆ‌‌. ಈ ಹಿನ್ನೆಲೆ ರಾಜೀವಗಾಂಧಿ ನಗರದ ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ್​ ಭೇಟಿ ನೀಡಿ, ಹೂವು ನೀಡುವ ಮೂಲಕ ಮಕ್ಕಳನ್ನು ಸ್ವಾಗತಿಸಿದರು.

ಅಂಗನವಾಡಿ ಕೇಂದ್ರದ ಸಿಬ್ಬಂದಿ ಆರತಿ ಬೆಳಗುವ ಮೂಲಕ ಮಕ್ಕಳನ್ನು ಬರಮಾಡಿಕೊಂಡರು. ನಂತರ ಜಿಲ್ಲಾಧಿಕಾರಿ, ಪೋಷಕರು ಹಾಗೂ ಬಾಲವಿಕಾಸ ಸಮಿತಿ ಅಧ್ಯಕ್ಷರು, ಸದಸ್ಯರು ಮತ್ತು ಪಾಲಿಕೆ ಸದಸ್ಯರೊಂದಿಗೆ ಮಕ್ಕಳಿಗೆ ನೀಡುವ ಆಹಾರ, ಅಂಗನವಾಡಿ ಕೇಂದ್ರದ ಸೌಲಭ್ಯಗಳು ಹಾಗೂ ಮಕ್ಕಳ ಕಲಿಕೆಯ ಕುರಿತು ಮಾಹಿತಿ ಪಡೆದುಕೊಂಡರು.

ಹೂವು ನೀಡುವ ಮೂಲಕ ಮಕ್ಕಳನ್ನು ಸ್ವಾಗತಿಸಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ್​

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಲಕ್ಷ್ಮಿ ಹಿಂಡಸಗೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಡಾ.ಎಚ್.ಎಚ್. ಕುಕನೂರ, ತಾಲೂಕಾ ಶಿಶು ಅಭಿವೃದ್ಧಿ ಅಧಿಕಾರಿ ಡಾ.ಕಮಲಾ ಬೈಲೂರ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಸಾಹಿರಾಬಾನು, ಅಂಗನವಾಡಿ ಕಾರ್ಯಕರ್ತೆ ಸುವರ್ಣಾ ಪಾಣಿಗಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ABOUT THE AUTHOR

...view details