ಧಾರವಾಡ:ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹಾಗೂ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಹಾಗೂ ಜಂಟಿ ಆಯುಕ್ತ ಮಾಧವ್ ಗಿತ್ತೆ ಅವರು ಇಂದು ನಸುಕಿನ ಜಾವ ಸಿಟಿ ರೌಂಡ್ಸ್ ಹಾಕಿ, ಸ್ವಚ್ಛತಾ ಕಾರ್ಯ ಪರಿಶೀಲಿಸಿದರು.
ಸೈಕಲ್ನಲ್ಲಿ ಸಿಟಿ ರೌಂಡ್ಸ್ ಹಾಕಿದ ಧಾರವಾಡ ಜಿಲ್ಲಾಧಿಕಾರಿ, ಕಮೀಷನರ್ ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದ ಪೌರ ಕಾರ್ಮಿಕರೊಂದಿಗೆ ಚಹಾ ಸೇವಿಸುವುದರೊಂದಿಗೆ ಅವರ ಕುಂದುಕೊರತೆಗಳನ್ನು ಆಲಿಸಿದರು. ಅಜಾದ್ ಪಾರ್ಕ್, ಸೂಪರ್ ಮಾರ್ಕೆಟ್ ಪ್ರದೇಶಗಳಿಗೆ ಭೇಟಿ ನೀಡಿದರು.
ಜಾಹೀರಾತು-ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಸ್ವಚ್ಛ ಸರ್ವೇಕ್ಷಣಾ ಅಭಿಯಾನ ಯಶಸ್ವಿಗೊಳಿಸಲು ಅಧಿಕಾರಿಗಳು ಸ್ವತಃ ಸೈಕಲ್ ಏರಿ ನಗರ ಸುತ್ತಾಡುವುದರೊಂದಿಗೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ:ಬೆಂಗಳೂರು: ಹೆಂಡ್ತಿ ಆಸೆ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಪತಿ!