ಧಾರವಾಡ: ಕೊರೊನಾ ವೈರಸ್ ಭೀತಿಯಿಂದ ದೇಶಾದ್ಯಂತ ಲಾಕ್ಡೌನ್ 4.O ಜಾರಿಯಲ್ಲಿದ್ದು ಕೊಂಚ ಸಡಿಲಿಕೆ ಮಾಡಲಾಗಿದೆ. ಪ್ರತಿ ಭಾನುವಾರ ಸಂಪೂರ್ಣ ಲಾಕ್ಡೌನ್ ಆದೇಶ ಹೊರಡಿಸಿದ ಹಿನ್ನೆಲೆ ಇಂದು ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸದೇ ಮಾರುಕಟ್ಟೆಯಲ್ಲಿ ಜನರು ತರಕಾರಿ ಖರೀದಿಸುತ್ತಿರುವ ದೃಶ್ಯ ಕಂಡು ಬಂತು.
ನಾಳೆ ಸಂಪೂರ್ಣ ಲಾಕ್ಡೌನ್: ಧಾರವಾಡ ಮಾರುಕಟ್ಟೆಯಲ್ಲಿ ಜನಜಂಗುಳಿ - Dharwad people not followed the social distance in market
ನಾಳೆ ಸಂಪೂರ್ಣವಾಗಿ ಧಾರವಾಡ ಜಿಲ್ಲೆ ಸ್ತಬ್ಧವಾಗಲಿದ್ದು, ಸೆಕ್ಷನ್ 144 ಜಾರಿಯಲ್ಲಿರಲಿದೆ. ಈ ಹಿನ್ನೆಲೆ ಇಂದೇ ಜನರು ಸಾಮಾಜಿಕ ಅಂತರ ಮರೆತು ತರಕಾರಿ ಖರೀದಿಸುತ್ತಿರುವ ದೃಶ್ಯ ಧಾರವಾಡ ಮಾರುಕಟ್ಟೆಯಲ್ಲಿ ಕಂಡು ಬಂತು.
![ನಾಳೆ ಸಂಪೂರ್ಣ ಲಾಕ್ಡೌನ್: ಧಾರವಾಡ ಮಾರುಕಟ್ಟೆಯಲ್ಲಿ ಜನಜಂಗುಳಿ Dharwad people not followed the social distance in market](https://etvbharatimages.akamaized.net/etvbharat/prod-images/768-512-7314819-thumbnail-3x2-lek.jpg)
ಧಾರವಾಡ ಮಾರುಕಟ್ಟೆಯಲ್ಲಿ ಜನಜಂಗುಳಿ
ಧಾರವಾಡ ಮಾರುಕಟ್ಟೆಯಲ್ಲಿ ಜನಜಂಗುಳಿ
ನಾಳೆ ಸಂಪೂರ್ಣವಾಗಿ ಧಾರವಾಡ ಜಿಲ್ಲೆ ಸ್ತಬ್ಧವಾಗಲಿದ್ದು, ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿಯಲ್ಲಿರಲಿದೆ. ಇಂದು ಸಂಜೆ 7 ಗಂಟೆಯಿಂದ ನಾಳೆ ಸಂಜೆ 7 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದು, ಜನರು ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ.
ಇನ್ನು ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಪಾಲಿಸದೆ ಹಾಗೂ ಮಾಸ್ಕ್ ಧರಿಸದೆ ಜನರು ಆಗಮಿಸಿದ್ದಾರೆ. ಧಾರವಾಡದ ಮಾರುಕಟ್ಟೆ ಜನದಟ್ಟಣೆಯಿಂದ ಕೂಡಿದೆ.