ಧಾರವಾಡ:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಸಾರಿಗೆ ನೌಕರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಪಿ.ಹೆಚ್.ನೀರಲಕೇರಿ ನೇತೃತ್ವದಲ್ಲಿ 'ಜೈಲು ಭರೋ ಚಳುವಳಿ' ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ 20ಕ್ಕೂ ಹೆಚ್ಚು ಸಾರಿಗೆ ನೌಕರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.