ಧಾರವಾಡ: ತಡರಾತ್ರಿ ಸುರಿದ ಮಳೆಗೆ ಧಾರವಾಡ ತಾಲೂಕಿನ ಹೊಸಟ್ಟಿ ಗ್ರಾಮದ ಕೆರೆ ಕಟ್ಟೆ ಒಡೆದು ನೀರು ಮನೆಗಳಿಗೆ ನುಗ್ಗಿದೆ.
ಕೆರೆ ಕೋಡಿ ಒಡೆದು ಮನೆಗಳಿಗೆ ನುಗ್ಗಿದ ನೀರು: ಸ್ಥಳಕ್ಕೆ ಶಾಸಕ ಭೇಟಿ - ಧಾರವಾಡದಲ್ಲಿ ಧಾರಾಕಾರ ಮಳೆ
ತಡರಾತ್ರಿ ಸುರಿದ ಮಳೆಗೆ ಧಾರವಾಡ ತಾಲೂಕಿನ ಹೊಸಟ್ಟಿ ಗ್ರಾಮದ ಕೆರೆ ಕಟ್ಟೆ ಒಡೆದು ನೀರು ಮನೆಗಳಿಗೆ ನುಗ್ಗಿದೆ.
ಮನೆಗಳಿಗೆ ನುಗ್ಗಿದ ಮಳೆ ನೀರು
ಧಾರವಾಡದಲ್ಲಿ ನಿನ್ನೆ ಹೆಚ್ಚು ಮಳೆಯಾಗಿದ್ದು, ಕೆರೆಯ ಕೋಡಿಯಿಂದ ಹರಿದು ಬಂದ ನೀರು ಮನೆಗಳಿಗೆ ನುಗ್ಗಿದೆ. ವಿಷಯ ತಿಳಿಯುತ್ತಿದ್ದಂತೆ ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಸ್ಥಳಕ್ಕೆ ಭೇಟಿ ನೀಡಿ, ಕೂಡಲೇ ಗ್ರಾಮದ ತಗ್ಗು ಪ್ರದೇಶದ ಮನೆಗಳ ಜನರನ್ನು ಸ್ಥಳಾಂತರ ಮಾಡುವಂತೆ ತಹಶೀಲ್ದಾರ್ಗೆ ಸೂಚನೆ ನೀಡಿದ್ದಾರೆ. ಮಧ್ಯರಾತ್ರಿಯೇ ಗ್ರಾಮಕ್ಕೆ ಶಾಸಕರು, ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.