ಕರ್ನಾಟಕ

karnataka

'ಮೆಡಿಕಲ್ ಆಕ್ಸಿಜನ್ ಫಾರ್ ಆಲ್' ತಂಡದ ಆಕ್ಸಿಜನ್ ಕಾನ್ಸನ್ಟ್ರೇಟರ್ ವಿತರಿಸಿದ ಧಾರವಾಡ ಎಸ್​ಪಿ

By

Published : May 27, 2021, 7:45 PM IST

ಎಸ್​ಪಿ ಕೃಷ್ಣಕಾಂತ ಅವರ ಸ್ನೇಹಿತರು ಭಾರತ ಮತ್ತು ಆಸ್ಟ್ರೇಲಿಯಾದಲ್ಲಿ ನಡೆಸುತ್ತಿರುವ ಮೆಡಿಕಲ್ ಆಕ್ಸಿಜನ್ ಫಾರ್ ಆಲ್ ತಂಡದಿಂದ ಕಾನ್ಸನ್ಟ್ರೇಟರ್ ಆರೋಗ್ಯ ಇಲಾಖೆಗೆ ನೀಡಲಾಗಿದೆ. ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಕೊಡಲಾಗಿದ್ದು, 8 ಲೀಟರ್​ನ 22 ಆಕ್ಸಿಜನ್ ಕಾನ್ಸನ್ಟ್ರೇಟರ್ ವಿತರಿಸಿದರು.

Dharwad SP
ಧಾರವಾಡ ಎಸ್​ಪಿ

ಧಾರವಾಡ:ತಮ್ಮ ಸ್ನೇಹಿತರ 'ಮೆಡಿಕಲ್ ಆಕ್ಸಿಜನ್ ಫಾರ್ ಆಲ್' ತಂಡದಿಂದ ಪಡೆದ ಆಕ್ಸಿಜನ್ ಕಾನ್ಸನ್ಟ್ರೇಟರ್​ಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಕಾಂತ ಆರೋಗ್ಯ ಇಲಾಖೆಗೆ ಹಸ್ತಾಂತರಿಸಿದರು.

ಓದಿ: ಬಿಜೆಪಿಯಲ್ಲಿ ಮೂರು ಬಣ ಹೇಳಿಕೆ: ಸಿ.ಪಿ. ಯೋಗೇಶ್ವರ್ ವಿರುದ್ಧ ಹಾಲಪ್ಪ, ರಾಜುಗೌಡ ಕಿಡಿ

ಎಸ್​​ಪಿ ಕಚೇರಿಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಯಶವಂತ ಮದೀನಕರ ಅವರು ಆಕ್ಸಿಜನ್ ಕಾನ್ಸನ್ಟ್ರೇಟರ್​ಗಳನ್ನು ಪಡೆದುಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಕಾಂತ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ನಿಂದ, ಕೊವೀಡ್ ಕಾಳಜಿ ಕೇಂದ್ರ ಆರಂಭಿಸಲಾಗಿದೆ. ಅಲ್ಲಿ ಉಸಿರಾಟ ತೊಂದರೆಯಾದರೆ ಸೋಂಕಿತರಿಗೆ ನೀಡಿ ಅವರ ಸಹಾಯಕ್ಕೆ ನಿಲ್ಲಲು ಆಕ್ಸಿಜನ್ ಕಾನ್ಸನ್ಟ್ರೇಟರ್ ನೀಡಲಾಗಿದೆ ಎಂದರು.

ಎಸ್​ಪಿ ಕೃಷ್ಣಕಾಂತ ಅವರ ಸ್ನೇಹಿತರು ಭಾರತ ಮತ್ತು ಆಸ್ಟ್ರೇಲಿಯಾದಲ್ಲಿ ನಡೆಸುತ್ತಿರುವ ಮೆಡಿಕಲ್ ಆಕ್ಸಿಜನ್ ಫಾರ್ ಆಲ್ ತಂಡದಿಂದ ಕಾನ್ಸನ್ಟ್ರೇಟರ್ ಆರೋಗ್ಯ ಇಲಾಖೆಗೆ ನೀಡಲಾಗಿದೆ. ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಕೊಡಲಾಗಿದ್ದು, 8 ಲೀಟರ್​ನ 22 ಆಕ್ಸಿಜನ್ ಕಾನ್ಸನ್ಟ್ರೇಟರ್ ವಿತರಿಸಿದರು.

ಗ್ರಾಮೀಣ ಭಾಗದಲ್ಲಿ ಸೋಂಕು ತೀವ್ರವಾಗಿದ್ದು, ಕೊರೊನಾ ನಿಯಮಾವಳಿಗಳನ್ನು ಪಾಲಿಸಿ ಕೊರೊನಾ ಮುಕ್ತರಾಗಬೇಕು. ತಮ್ಮ ತಮ್ಮ ಮನೆಯಲ್ಲಿದ್ದುಕೊಂಡು ಸೋಂಕು ಹರಡದಂತೆ ಎಚ್ಚರಿಕೆ ವಹಿಸಿ ಎಂದು ಮನವಿ ಮಾಡಿಕೊಂಡರು.

ABOUT THE AUTHOR

...view details