ಕರ್ನಾಟಕ

karnataka

ETV Bharat / city

ಗ್ರಾ.ಪಂ.ಚುನಾವಣೆ: ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ - Gram Panchayat elections

ಧಾರವಾಡ, ಅಳ್ನಾವರ ಹಾಗೂ ಕಲಘಟಗಿ ತಾಲೂಕಿನ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಇಂದು ಸಂಜೆ 5 ಗಂಟೆಯಿಂದ ಡಿಸೆಂಬರ್ 22ರ ಸಂಜೆ 5 ಗಂಟೆಯವರೆಗೆ ನಿಷೇಧ ಹೇರಲಾಗಿದೆ.

District Collector Nitesh Patil
ಜಿಲ್ಲಾಧಿಕಾರಿ ನಿತೇಶ್ ಪಾಟೀಲ್

By

Published : Dec 20, 2020, 3:42 PM IST

ಧಾರವಾಡ: ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಧಾರವಾಡ, ಅಳ್ನಾವರ ಹಾಗೂ ಕಲಘಟಗಿ ತಾಲೂಕಿನ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಇಂದು ಸಂಜೆ 5 ಗಂಟೆಯಿಂದ ಡಿಸೆಂಬರ್ 22ರ ಸಂಜೆ 5 ಗಂಟೆಯವರೆಗೆ ನಿಷೇಧ ಹೇರಲಾಗಿದೆ.

ಓದಿ:ಬಿಜೆಪಿ ಪದಾಧಿಕಾರಿಗಳ ಸಭೆ: ಕಾಂಗ್ರೆಸ್ ವಿರುದ್ಧ ಕಟೀಲ್, ಸಿಟಿ ರವಿ ವಾಗ್ದಾಳಿ

ಹುಬ್ಬಳ್ಳಿ, ಕುಂದಗೋಳ, ಅಣ್ಣಿಗೇರಿ ಹಾಗೂ ನವಲಗುಂದ ತಾಲೂಕಿನ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಡಿ. 25ರ ಸಂಜೆ 5ಗಂಟೆಯಿಂದ ಡಿ.27ರ ಸಂಜೆ 5 ಗಂಟೆಯವರೆಗೆ ಸಿಆರ್​ಪಿಸಿ ಕಾಯ್ದೆ 1973ರ ಕಲಂ 144 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರ ಅಡಿ ಷರತ್ತುಗಳನ್ನು ವಿಧಿಸಿ ಪ್ರತಿಬಂಧಕಾಜ್ಞೆ ಆದೇಶವನ್ನು ಹೊರಡಿಸಿದ್ದಾರೆ..

ABOUT THE AUTHOR

...view details