ಹುಬ್ಬಳ್ಳಿ:ಸರ್ಕಾರಿ ಕಚೇರಿಗಳಲ್ಲಿ ಹೋಮ ಹವನ ಮಾಡಲು ಅವಕಾಶವಿಲ್ಲ. ಆದ್ರೆ ಇಲ್ಲೊಂದು ಗ್ರಾಮ ಪಂಚಾಯಿತಿಯಲ್ಲಿ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಕಾನೂನು ಗಾಳಿಗೆ ತೂರಿ ಗ್ರಾಮ ಪಂಚಾಯಿತಿಯಲ್ಲಿ ಹೋಮ ಹವನ ಮಾಡಿರುವುದು ಬೆಳಕಿಗೆ ಬಂದಿದೆ.
ಹೌದು, ಕಲಘಟಗಿ ತಾಲೂಕಿನ ಮುಕ್ಕಲ್ ಗ್ರಾಮಪಂಚಾಯಿತಿಯ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಲಿಂಗಾರೆಡ್ಡಿ ನಡುವಿನಮನಿ ಹಾಗೂ ಉಪಾಧ್ಯಕ್ಷ ಶ್ರೀಕಾಂತ್ ಪಾಟೀಲ್ ಹಾಗೂ ಸದಸ್ಯರು ಪಂಚಾಯಿತಿಯಲ್ಲಿಯೇ ಹೋಮ ಹವನ ನಡೆಸಿದ್ದಾರೆ. ಗ್ರಾಮ ಪಂಚಾಯಿತಿ ಪಿಡಿಒ ಅವರ ಸಮ್ಮುಖದಲ್ಲಿಯೇ ಪಂಚಾಯಿತಿಯಲ್ಲಿ ಹೋಮ ಹವನ, ಪೂಜೆ ನಡೆಸಿದ್ದು ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿದೆ.