ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸಿಗದ ರಿಲೀಫ್: ಮತ್ತೆ 14 ದಿನ ನ್ಯಾಯಾಂಗ ಬಂಧನ - ಸಿಬಿಐ ವಿಶೇಷ ನ್ಯಾಯಾಲಯ ಆದೇಶ
16:25 December 07
15:30 December 07
ಕುಲಕರ್ಣಿಗೆ ಜೈಲೇ ಗತಿ
ಧಾರವಾಡ:ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿದೆ.
ಸಿಬಿಐ ವಿಶೇಷ ನ್ಯಾಯಾಲಯ ಇಂದು ವಿಚಾರಣೆ ನಡೆಸಿ ವಿನಯ್ ಕುಲಕರ್ಣಿ ಅವರ ನ್ಯಾಯಾಂಗ ಬಂಧನವನ್ನು ಡಿಸೆಂಬರ್ 21 ರವರೆಗೆ ವಿಸ್ತರಿಸಿದೆ.
ಈಗಾಗಲೇ ಮಾಜಿ ಸಚಿವ ವಿನಯ್ ಕುಲಕರ್ಣಿ ಜಿಪಂ ಸದಸ್ಯ ಯೋಗೀಶ ಗೌಡ ಹತ್ಯೆ ಪ್ರಕಣರದಲ್ಲಿ ಬಂಧನಕ್ಕೊಳಗಾಗಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದಾರೆ.
ಇದನ್ನೂ ಓದಿ: ವಿನಯ್ ಕುಲಕರ್ಣಿಗೆ ರಾಜಾತಿಥ್ಯ ಆರೋಪ.. ಹಿಂಡಲಗಾ ಜೈಲು ಅಧೀಕ್ಷಕರು ಹೀಗಂದರು..
TAGGED:
yogish gowda murdercase