ಹುಬ್ಬಳ್ಳಿ: ಬಾರ್ ಪರಿಶೀಲನೆಗೆ ಆಗಮಿಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಬಾರ್ ಮಾಲೀಕನ ಮೇಲೆ ದರ್ಪ ತೋರಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಬಾರ್ ಮಾಲೀಕನ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳಿಂದ ಹಲ್ಲೆ ಆರೋಪ - ಬಾರ್ ಮಾಲೀಕನ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ಹಲ್ಲೆ
ಬಾರ್ ಪರಿಶೀಲನೆಗೆ ಆಗಮಿಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಬಾರ್ ಮಾಲೀಕನ ಮೇಲೆ ದರ್ಪ ತೋರಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಪ್ರಿನ್ಸ್ ಗೇಟ್ ಬಾರ್ ಆ್ಯಂಡ್ ರೆಸ್ಟೋರೆಂಟ್ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ದಾಖಲೆ ಸರಿಯಿದ್ದರೂ ಕೂಡ ಹಣ ಕೊಡುವಂತೆ ಮಾಲೀಕನಿಗೆ ಅವಾಜ್ ಹಾಕಿದ್ದಾರೆ ಎನ್ನಲಾಗಿದೆ. ಹಣ ನೀಡಲು ಬಾರ್ ಮಾಲೀಕ ಶ್ರೀನಿವಾಸ್ ಜಿತೂರಿ ನಿರಾಕರಿಸಿದ್ದಕ್ಕೆ ಅಧಿಕಾರಿಗಳು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ನಾನು ಎಷ್ಟೇ ಕೇಳಿಕೊಂಡರು ಕೂಡ ಬಿಡಲಿಲ್ಲ ಎಂದು ಬಾರ್ ಮಾಲೀಕ ಆರೋಪಿಸಿದ್ದಾರೆ.
ಅಬಕಾರಿ ಇಲಾಖೆ ಅಧಿಕಾರಿಗಳು ಬಾರ್ಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ದಾಖಲೆಗಳು ಸರಿಯಾಗಿಲ್ಲ ಎಂದ್ರೆ ಕಾನೂನು ಕ್ರಮ ಕೈಗೊಳ್ಳಬೇಕು. ಅದನ್ನು ಬಿಟ್ಟು ಹಣ ವಸೂಲಿ ಮಾಡುತ್ತಿರುವುದು ಎಷ್ಟು ಸರಿ ? ಎಂಬುವುದು ಸಾರ್ವಜನಿಕ ವಲಯದ ಪ್ರಶ್ನೆಯಾಗಿದೆ.