ಕರ್ನಾಟಕ

karnataka

ETV Bharat / city

ಹುಬ್ಬಳ್ಳಿ ಗಲಭೆ ಪ್ರಕರಣ : 154 ಆರೋಪಿಗಳಿಗೆ ಮೇ 13ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ - Hubli riot case

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ 154 ಆರೋಪಿಗಳಿಗೆ ಮೇ13ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ 4ನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ..

Extension of judicial custody for accused in Hubli riot case
ಹುಬ್ಬಳ್ಳಿ ಗಲಭೆ ಪ್ರಕರಣ: 154 ಆರೋಪಿಗಳಿಗೆ ಮೇ.13 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

By

Published : May 2, 2022, 11:52 AM IST

ಹುಬ್ಬಳ್ಳಿ :ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಂಐಎಂ ಕಾರ್ಪೊರೇಟರ್ ಸೇರಿದಂತೆ 154 ಆರೋಪಿಗಳಿಗೆ ಮೇ 13ರವರೆಗೆ ನ್ಯಾಯಾಂಗ ಬಂಧನ ವಿಧಿಸಿ 4 ನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಕಲಬುರ್ಗಿ ಸೆಂಟ್ರಲ್ ಜೈಲಿನಲ್ಲಿ 103 ಮಂದಿಯನ್ನು, ಬಳ್ಳಾರಿ ಜೈಲಿನಲ್ಲಿ 17 ಮಂದಿ ಹಾಗೂ ಮೈಸೂರು ಜೈಲಿನಲ್ಲಿ 10 ಮಂದಿಯನ್ನು ಮತ್ತು ಉಳಿದವರನ್ನು ಹುಬ್ಬಳ್ಳಿ ಹಾಗೂ ಧಾರವಾಡ ಸಬ್ ಜೈಲಿನಲ್ಲಿ ಇರಿಸಲಾಗಿದೆ.

ಈ ಹಿಂದೆ ಏ.30ರವರೆಗೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ‌ಒಪ್ಪಿಸಲಾಗಿತ್ತು. ಬಳಿಕ ಅವಧಿ ಮುಗಿದ ನಂತರ ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಮೇ 13ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಜಾಮೀನು ಅರ್ಜಿ ಸಲ್ಲಿಕೆ: ಬಂಧಿತರಲ್ಲಿ 20 ಜನರು ಜಾಮೀನು ನೀಡುವಂತೆ ಕೋರ್ಟ್ ಮೊರೆ ಹೋಗಿದ್ದಾರೆ. ವಿದ್ಯಾಭ್ಯಾಸ, ಅನಾರೋಗ್ಯ ಸೇರಿದಂತೆ ಹಲವು ಅಂಶಗಳನ್ನು ಇಟ್ಟುಕೊಂಡು ಜಾಮೀನಿಗೆ ಅರ್ಜಿ ಹಾಕಿದ್ದು, ಪೊಲೀಸರು ಆಕ್ಷೇಪಣಾ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಓದಿ :ಜ್ಞಾನಜ್ಯೋತಿ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯ ಸಿಐಡಿಗೆ ಶರಣಾಗತಿ

ABOUT THE AUTHOR

...view details