ಹುಬ್ಬಳ್ಳಿ :ಹೊಸ ವರ್ಷ ಸಂಭ್ರಮಾಚರಣೆಗೆವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಖಾಸಗಿ ಹೋಟೆಲ್ಗಳು ನವಧುವಿನಂತೆ ಶೃಂಗಾರಗೊಳ್ಳುತ್ತಿದ್ದವು. ಜಗಮಗಿಸುವ ಲೈಟಿಂಗ್, ಡಿಜೆ ಸೌಂಡ್ಗೆ ಯುವಕರು ಸ್ಟೆಪ್ ಹಾಕಿ ಸಂಭ್ರಮಿಸುತ್ತಿದ್ದರು. ಆದರೆ, ಕೊರೊನಾ ಹಾಗೂ ಒಮಿಕ್ರಾನ್ ಭೀತಿ ಹಿನ್ನೆಲೆ ಈ ಬಾರಿಯೂ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ.
ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಅಲ್ಲದೇ ನಿಯಮ ಉಲ್ಲಂಘನೆ ಮಾಡಿದರೆ ಅವರ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ. ಎಂದಿನಂತೆ ರಾತ್ರಿ 10 ಗಂಟೆಗೆ ಎಲ್ಲವೂ ಬಂದ್ ಆಗಬೇಕು. ಡಿಜೆ, ಸಾಮೂಹಿಕ ಪಾರ್ಟಿ ನಡೆಸುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.