ಹುಬ್ಬಳ್ಳಿ:ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿದ ವಿವಿಧ ವಿವಿಧ ತಿದ್ದುಪಡಿ ಕಾಯ್ದೆಗಳು ಕಾರ್ಮಿಕರಿಗೆ ಮತ್ತು ರೈತ ವಿರೋಧಿಯಾಗಿವೆ ಆರೋಪಿಸಿ ಹುಬ್ಬಳ್ಳಿ ತಾಲೂಕು ರೈತಪರ ಹಾಗೂ ವಿವಿಧ ಸಂಘಟನೆ ಸಹಯೋಗದಲ್ಲಿಂದು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಹುಬ್ಬಳ್ಳಿ: ರೈತ ವಿರೋಧಿ ಕಾಯ್ದೆ ಕೈಬಿಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ - ರಾಜ್ಯ ಹಾಗೂ ದೇಶಾದ್ಯಂತ ಬಂದ್
ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊರೊನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸುಗ್ರೀವಾಜ್ಞೆ ಹಾಗೂ ರೈತ, ಕಾರ್ಮಿಕ ವಿರೋಧಿ ಕಾಯ್ದೆ ಜಾರಿಗೊಳಿಸಿರುವುದು ಖಂಡನೀಯವಾಗಿದೆ. ರಾಜ್ಯ ಹಾಗೂ ದೇಶಾದ್ಯಂತ ಬಂದ್ ಗೆ ಕರೆಕೊಟ್ಟಿದ್ದು, ಒಟ್ಟು 28 ಸಂಘಟನೆಯ ಸಹಯೋಗದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಹುಬ್ಬಳ್ಳಿ: ರೈತ ವಿರೋಧಿ ಕಾಯ್ದೆ ಕೈಬಿಡುವಂತೆ ಆಗ್ರಹ, ವಿವಿಧ ರೈತ ಸಂಘಟನೆಗಳಿಂದ ಪ್ರತಿಭಟನೆ
ಇದೇ ವೇಳೆ ಮಾತನಾಡಿದ ಮಾಜಿ ಶಾಸಕ ಎನ್.ಹೆಚ್. ಕೊನರೆಡ್ಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊರೊನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರೈತ, ಕಾರ್ಮಿಕ ವಿರೋಧಿ ಕಾಯ್ದೆ ಜಾರಿಗೊಳಿಸಿರುವುದು ಖಂಡನೀಯವಾಗಿದೆ ಎಂದರು.
ರಾಜ್ಯ ಹಾಗೂ ದೇಶಾದ್ಯಂತ ಬಂದ್ ಗೆ ಕರೆಕೊಟ್ಟಿದ್ದು, ಒಟ್ಟು 28 ಸಂಘಟನೆಗಳ ಸಹಯೋಗದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಯಾವುದೇ ಸಾರ್ವಜನಿಕ ಅವಶ್ಯಕ ಸೇವೆಗಳಿಗೆ ಧಕ್ಕೆ ಮಾಡದಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
Last Updated : Sep 25, 2020, 1:02 PM IST