ಧಾರವಾಡ :ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವಬಸವರಾಜ ಗುರಿಕಾರ ಅವರು ಈ ಸಾರಿ ಗೆಲುವು ಸಾಧಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕಳೆದ 40 ವರ್ಷಗಳ ಕಾಲ ಈ ಕ್ಷೇತ್ರದಲ್ಲಿ ಅವರು ಮಾಡಿರುವ ಪ್ರಾಮಾಣಿಕ ಕೆಲಸಕ್ಕೆ ಜನರು ಅವರನ್ನು ಗೆಲ್ಲಿಸುತ್ತಾರೆ.
ಶಿಕ್ಷಕರು ಬಿಜೆಪಿಯಿಂದ ಭ್ರಮನಿರಸನರಾಗಿದ್ದಾರೆ. ಬಿಜೆಪಿಗೆ ಯಾಕೆ ಮತ ಹಾಕಬೇಕು? ಬೆಲೆ ಏರಿಕೆಗೆ, ಭ್ರಷ್ಟಾಚಾರಕ್ಕಾಗಿ ಜನ ವಿಶ್ವಾಸ ಇಲ್ಲದ ಪಕ್ಷಕ್ಕೆ ಮತ ಹಾಕಬೇಕಾ? ಎಂದು ಪ್ರಶ್ನಿಸಿದರು. ಈಗಾಗಲೇ ನಿರಂತರವಾಗಿ 2 ವರ್ಷಗಳಿಂದ ಶಿಕ್ಷಕರ ಮೇಲೆ ಅನ್ಯಾಯವಾಗುತ್ತಿದೆ. ಇದಕ್ಕೆ ಸರ್ಕಾರ ಉತ್ತರ ಕೊಡಬೇಕು.
ತಲೆ ತಗ್ಗಿಸುವಂತಹ ಕೆಲಸ ಈ ಸರ್ಕಾರದಿಂದ ನಡೆಯುತ್ತಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಶಿಕ್ಷಕರ ನೇಮಕಾತಿ, ಪೊಲೀಸ್ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಇದರಿಂದ ಶಿಕ್ಷಕರು ಅರ್ಥ ಮಾಡಿಕೊಳ್ಳುತ್ತಾರೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗುರಿಕಾರ ಅವರನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.