ಧಾರವಾಡ: ಜಿಲ್ಲೆಯಲ್ಲಿ ಇಂದು 57 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 668ಕ್ಕೆ ಏರಿಕೆಯಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಇಂದು 57 ಹೊಸ ಕೇಸ್ ಪತ್ತೆ: 668ಕ್ಕೆ ಏರಿದ ಸೋಂಕಿತರ ಸಂಖ್ಯೆ - ಧಾರವಾಡ ಜಿಲ್ಲಾ ಸುದ್ದಿ
ರಾಜ್ಯದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಧಾರವಾಡ ಜಿಲ್ಲೆಯಲ್ಲಿ 57 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಸೋಂಕಿತರ ಸಂಪರ್ಕದಿಂದ 12 ಜನರಿಗೆ ಸೋಂಕು ತಗುಲಿದ್ದು, ಇವರ ಸಂಪರ್ಕದಲ್ಲಿದ್ದ 16 ಜನರನ್ನು ಪತ್ತೆ ಹಚ್ಚಲಾಗುತ್ತಿದೆ. ಐಎಲ್‌ಐ ಸಮಸ್ಯೆಯ 24 ಜನ ಹಾಗೂ ಅಂತರ್ ಜಿಲ್ಲಾ ಪ್ರವಾಸದ ಹಿನ್ನೆಲೆ ಹೊಂದಿರುವ ಓರ್ವ ಹಾಗೂ ಅಂತಾರಾಜ್ಯ ಪ್ರವಾಸದಿಂದ ಒಬ್ಬರಿಗೆ ಮತ್ತು ತೀವ್ರ ಉಸಿರಾಟ ತೊಂದರೆ ಇದ್ದ ಮೂವರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ 253 ಜನ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, 402 ಜನ ಸೋಂಕಿತರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿಯವರೆಗೆ 13 ಜನ ಮೃತಪಟ್ಟಿದ್ದಾರೆ.