ಧಾರವಾಡ: ಜಿಲ್ಲೆಯಲ್ಲಿ ಇಂದು ಒಂದೇ ದಿನ ಬರೋಬ್ಬರಿ 56 ಜನರಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದ್ದು, ಜಿಲ್ಲೆಯಲ್ಲಿನ ಸೋಂಕಿತರ ಸಂಖ್ಯೆ 611ಕ್ಕೇರಿಕೆಯಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಇಂದು 56 ಜನರಿಗೆ ಕೊರೊನಾ: 611ಕ್ಕೆ ಏರಿದ ಸೋಂಕಿತರ ಸಂಖ್ಯೆ - ಕೊರೊನಾ ಪ್ರಕರಣಗಳ ವರದಿ
ರಾಜ್ಯದಲ್ಲಿ ಕೋವಿಡ್ ಸೋಂಕು ಅಧಿಕವಾಗಿ ಹರಡುತ್ತಲೇ ಇದ್ದು, ಇಂದು ಧಾರವಾಡ ಜಿಲ್ಲೆಯಲ್ಲಿ 56 ಜನರಿಗೆ ಸೋಂಕು ತಗಲಿರುವುದು ಖಚಿತವಾಗಿದೆ. ಸೋಂಕಿತರಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಧಾರವಾಡ ಜಿಲ್ಲೆ
ಸೋಂಕಿತರ ಸಂಪರ್ಕದಿಂದ 18 ಜನರಿಗೆ ಸೋಂಕು ತಗುಲಿದೆ. ಸದ್ಯ 11 ಜನರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಐಎಲ್‌ಐ ಸಮಸ್ಯೆ ಕಾರಣ ಪರೀಕ್ಷೆ ಮಾಡಿದಾಗ 24 ಜನರಲ್ಲಿ ಕೊರೊನಾ ದೃಢಪಟ್ಟಿದೆ.
ಅಂತರ್ ಜಿಲ್ಲಾ ಪ್ರವಾಸದಿಂದ ಇಬ್ಬರಿಗೆ ಸೋಂಕು ತಲುಲಿದೆ. ತೀವ್ರ ಉಸಿರಾಟದ ತೊಂದರೆ ಇದ್ದ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.