ಧಾರವಾಡ:ಮಾರಕಾಸ್ತ್ರಗಳನ್ನು ತೋರಿಸಿ ಜೀವ ಬೆದರಿಕೆವೊಡ್ಡಿದ ಆರೋಪದಡಿ ಮೃತ ರೌಡಿ ಶೀಟರ್ ಫ್ರೂಟ್ ಇರ್ಫಾನ್ ಪುತ್ರನ ವಿರುದ್ಧ ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ರಮ್ಯಾ ರೆಸಿಡೆನ್ಸಿ ಬಳಿ ಫ್ರೂಟ್ ಇರ್ಫಾನ್ ಪುತ್ರ ಅರ್ಬಾಜ್ ತನ್ನ ಸಹಚರರೊಂದಿಗೆ ವ್ಯಕ್ತಿಯೊಬ್ಬರನ್ನು ಕರೆಸಿಕೊಂಡು ಮಾರಕಾಸ್ತ್ರಗಳನ್ನು ತೋರಿಸಿ ಜೀವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿಬಂದಿದೆ.