ಧಾರವಾಡ: ಜಿಲ್ಲೆಯಾದ್ಯಂತ ಕೊರೊನಾ ವೈರಸ್ ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಸಂಘ, ಸಂಸ್ಥೆಗಳು ಮತ್ತು ವ್ಯಕ್ತಿಗಳು ನೇರವಾಗಿ ಆಹಾರ ಧಾನ್ಯಗಳ ಕಿಟ್ ಹಾಗೂ ಇತರ ಸಾಮಗ್ರಿಗಳನ್ನು ವಿತರಿಸುವುದನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.
ಧಾರವಾಡದಲ್ಲಿ ಸಂಘ-ಸಂಸ್ಥೆ, ಸಾರ್ವಜನಿಕರಿಂದ ನೇರವಾಗಿ ಆಹಾರದ ಕಿಟ್, ವಸ್ತುಗಳ ವಿತರಣೆಗೆ ನಿರ್ಬಂಧ
ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಧಾರವಾಡ ಜಿಲ್ಲೆಯಲ್ಲಿ ಆಹಾರ ಧಾನ್ಯಗಳ ಕಿಟ್ ಹಾಗೂ ಇತರೆ ಸಾಮಾಗ್ರಿಗಳನ್ನು ನೇರವಾಗಿ ವಿತರಿಸುವುದನ್ನ ಕಡ್ಡಾಯವಾಗಿ ನಿರ್ಬಧಿಸಲಾಗಿದೆ.
ಜಿಲ್ಲೆಯಲ್ಲಿ ಈಗಾಗಲೇ ಕೊರೊನಾ ದೃಢಪಟ್ಟಿರುವ ವ್ಯಕ್ತಿಗಳು ವಿವಿಧ ಕಡೆ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡಿರುವುದು ಕಂಡು ಬಂದಿದೆ. ಇದರಿಂದ ಕೊರೊನಾ ವೈರಸ್ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಹೆಚ್ಚಾಗಿದೆ. ಆದ್ದರಿಂದ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಧಾರವಾಡ ಜಿಲ್ಲೆಯಲ್ಲಿ ಆಹಾರ ಧಾನ್ಯಗಳ ಕಿಟ್ ಹಾಗೂ ಇತರೆ ಸಾಮಾಗ್ರಿಗಳನ್ನು ವಿತರಿಸುವುದನ್ನ ಕಡ್ಡಾಯವಾಗಿ ನಿರ್ಬಧಿಸಲಾಗಿದೆ.
ಈ ನಿಯಮಗಳನ್ನು ಸಾರ್ವಜನಿಕರು ಪಾಲಿಸದೇ ಇದ್ದಲ್ಲಿ ಅಂತಹವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು. ಆಹಾರ ಪದಾರ್ಥಗಳನ್ನು ವಿತರಿಸಲು ಇಚ್ಛಿಸುವವರು ಈಗಾಗಲೇ ಇದೇ ಉದ್ದೇಶಕ್ಕೆ ತೆರೆದ ಧಾರವಾಡ ಮತ್ತು ಹುಬ್ಬಳ್ಳಿಯ ವಿಶೇಷ ಕೇಂದ್ರಗಳಲ್ಲಿ ನೀಡಲು ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.