ಹುಬ್ಬಳ್ಳಿ : ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಕಾಲೇಜು ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳಿಗೆ ಪರಿಹಾರ ಕಂಡಕೊಳ್ಳಲು ಹೋರಾಟದ ರೂಪುರೇಷೆಗಳ ಕುರಿತು ಮಾಜಿ ಸಭಾಪತಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನೇತೃತ್ವದಲ್ಲಿಂದು ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆಯಲ್ಲಿ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ ಹೊರಟ್ಟಿ, ಸರ್ಕಾರಕ್ಕೆ ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಕಾಲೇಜು ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳ ಕುರಿತು ಸುಮಾರು ವರ್ಷಗಳಿಂದ ಮನವಿ ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಕೇಳಿಕೊಂಡರು ಸರ್ಕಾರ ಮಾತ್ರ ಆಶ್ವಾಸನೆ ನೀಡುತ್ತಿದೆಯೇ ವಿನಃ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.