ಕರ್ನಾಟಕ

karnataka

ETV Bharat / city

ರಾತ್ರೋರಾತ್ರಿ ದೆಹಲಿಗೆ ತೆರಳಿದ ಶೆಟ್ಟರ್: ಕುತೂಹಲ ಕೆರಳಿಸಿದ ಮಾಜಿ ಸಿಎಂ ಪ್ರಯಾಣ - ಜಗದೀಶ್ ಶೆಟ್ಟರ್ ದೆಹಲಿಗೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ರಾಷ್ಟ್ರ ರಾಜಧಾನಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ.

jagadeesh shetttar
ಜಗದೀಶ್ ಶೆಟ್ಟರ್

By

Published : Feb 10, 2022, 9:57 AM IST

ಹುಬ್ಬಳ್ಳಿ/ಧಾರವಾಡ: ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಇದೀಗ ಮಾಜಿ ಸಿಎಂ ಜಗದೀಶ್ ಶೆಟ್ಟರ್ ದಿಢೀರ್ ದೆಹಲಿಗೆ ತೆರಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಿದ ಬೆನ್ನಲ್ಲೇ ಶೆಟ್ಟರ್ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ರಾತ್ರೋರಾತ್ರಿಯೇ ದೆಹಲಿಗೆ ಪ್ರಯಾಣಿಸಿರುವುದು ಕುತೂಹಲಕ್ಕೆ ಕಾರಣ.

ಇದನ್ನೂ ಓದಿ:ಮಂಗಳೂರು ಏರ್ಪೋರ್ಟ್‌ನಲ್ಲಿ ₹25 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ವಶ

ಸಚಿವ ಸಂಪುಟ ಪುನರ್‌ರಚನೆ ಮಾಡಿ ಶೆಟ್ಟರ್​​ಗೆ​​ ಅವಕಾಶ ನೀಡಿದರೆ ಅದನ್ನು ಅವರು ಒಪ್ಪಿಕೊಳ್ಳುತ್ತಾರೋ ಇಲ್ಲವೋ ಎಂಬುವುದನ್ನು ಅರಿಯಲು ಹಾಗೂ ಯಾರಿಗೆ ಸಚಿವ ಸ್ಥಾನ ಕೊಡಬೇಕು, ಯಾರನ್ನು ಕೈ ಬಿಡಬೇಕು ಎಂಬುದರ ಬಗ್ಗೆ ಸಲಹೆ ಕೇಳಲು ಅವರನ್ನು ಕರೆದಿರಬಹುದು ಎನ್ನಲಾಗುತ್ತಿದೆ. ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ಬೇಡ ಎಂದಿದ್ದ ಶೆಟ್ಟರ್ ಏಕಾಏಕಿ ದೆಹಲಿ ತೆರಳಿರುವುದು ಚರ್ಚೆಗೆ ಗ್ರಾಸವಾಗಿದೆ.

ABOUT THE AUTHOR

...view details