ಧಾರವಾಡ:ಪಿಎಸ್‌ಐ ನೇಮಕಾತಿ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪ್ರತಿಕ್ರಿಯಿಸಿದ್ದಾರೆ. ಪಿಎಸ್‌ಐ ನೇಮಕಾತಿ ಮಾಡುವುದು ಗೃಹ ಸಚಿವರ ಜವಾಬ್ದಾರಿ. ಆದರೆ ಇಲಾಖೆ ಅವರ ಹತೋಟಿಯಲ್ಲಿ ಇಲ್ಲ ಎಂದು ಹೇಳಿದರು.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ಪ್ರಕರಣಗಳು ಒಂದೊಂದೇ ಬೆಳಕಿಗೆ ಬರುತ್ತಿವೆ. ನಾನು ಸಿಎಂ ಇದ್ದಾಗ ಅನೇಕ ಪಿಎಸ್‌ಐ ನೇಮಕಾತಿಗಳು ನಡೆದಿವೆ. ಒಂದೂ ಭ್ರಷ್ಟಾಚಾರ ನಡೆದಿಲ್ಲ. ಆಯಾ ಇಲಾಖೆಯ ಸಚಿವರು ಆಯಾ ಇಲಾಖೆಯ ಜವಾಬ್ದಾರರು. ಇದರಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳ ಅಮಾನತು ಆಗಿಲ್ಲ. ಸಚಿವರು ಯಾರೂ ಅವರ ಪದವಿ ಬಿಟ್ಟು ಕೊಟ್ಟಿಲ್ಲ. ಇವರಲ್ಲಿ ನೈತಿಕ, ಭೌತಿಕ ಜವಾಬ್ದಾರಿ ಎರಡೂ ಇಲ್ಲ ಎಂದು ಟೀಕಿಸಿದರು.