ಕರ್ನಾಟಕ

karnataka

ETV Bharat / city

ಹಳೆ ಬಸ್​ ಪಾಸ್​ ಇದ್ರೆ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ: ವಾಕರಸಾ ಸಂಸ್ಥೆ - Free travel for students on transport agency buses

ಕಾಲೇಜು ವಿದ್ಯಾರ್ಥಿಗಳು ತಮ್ಮ ಹಳೆ ಬಸ್​ ಪಾಸ್​ ತೋರಿಸಿ ಡಿಸೆಂಬರ್ 10 ರವರೆಗೆ ಸಾರಿಗೆ ಸಂಸ್ಥೆಯ ಬಸ್​ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಮಾಹಿತಿ ನೀಡಿದ್ದಾರೆ.

dsd
ಸಾರಿಗೆ ಸಂಸ್ಥೆ ಬಸ್​ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

By

Published : Nov 21, 2020, 8:02 AM IST

ಹುಬ್ಬಳ್ಳಿ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪುನಾರಂಭಗೊಂಡಿರುವ ಕಾಲೇಜು ವಿದ್ಯಾರ್ಥಿಗಳಿಗೆ 2019-20ನೇ ಸಾಲಿನ ರಿಯಾಯಿತಿ ಬಸ್ ಪಾಸ್ ಆಧಾರದಲ್ಲಿ ಸಾರಿಗೆ ಸಂಸ್ಥೆಯ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳು ಹಾಗೂ ಪೋಷಕರ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ತರಗತಿಗಳು ಪ್ರಾರಂಭವಾಗಿರುವ ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ತಾಂತ್ರಿಕ, ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಪ್ರಸಕ್ತ ವರ್ಷದಲ್ಲಿ ಕಾಲೇಜುಗಳಿಗೆ ದಾಖಲಾಗಿರುವ ಬಗ್ಗೆ ಶುಲ್ಕ ಪಾವತಿ ರಸೀದಿ ಹಾಗೂ ಕಳೆದ ವರ್ಷದ ಬಸ್ ಪಾಸ್ ತೋರಿಸಿ ತಮ್ಮ ವಾಸ ಸ್ಥಳದಿಂದ ಕಾಲೇಜಿಗೆ ಹೋಗಿಬರಬಹುದು.

ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಮತ್ತು ವೇಗದೂತ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿದೆ ಎಂದು ವಾಕರಸಾ ಸಂಸ್ಥೆ, ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ತಿಳಿಸಿದ್ದಾರೆ.

ABOUT THE AUTHOR

...view details