ಕರ್ನಾಟಕ

karnataka

ETV Bharat / city

ಭಾರಿ ಅನಾಹುತ ತಪ್ಪಿಸಿದ ಅಗ್ನಿಶಾಮಕ  ಇಲಾಖೆ ಸಿಬ್ಬಂದಿ! - ಅಗ್ನಿಶಾಮಕ ದಳ

ಮನೆಗೆ ಅಡುಗೆ ಅನಿಲ ಸರಬರಾಜು ಮಾಡುವ ಪೈಪ್​ಲೈನ್ ಒಡೆದು ಅಡುಗೆ ಅನಿಲ ಸೋರಿಕೆಯಾಗಿದ್ದು, ಸಾರ್ವಜನಿಕರು ಆತಂಕಗೊಂಡಿದ್ದರು.

fire brigade
fire brigade

By

Published : Jul 20, 2020, 2:56 PM IST

ಹುಬ್ಬಳ್ಳಿ:ವಾಣಿಜ್ಯ ನಗರಿ ಹುಬ್ಬಳ್ಳಿಯ ನವನಗರದ ಕರ್ನಾಟಕ ಸರ್ಕಲ್​ನಲ್ಲಿ ಅನಿಲ ಸೋರಿಕೆಯಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿಸಿದ್ದಾರೆ.

ಅನಾಹುತ ತಪ್ಪಿಸಿದ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಸಿಬ್ಬಂದಿ

ಮನೆಗೆ ಅಡುಗೆ ಅನಿಲ ಸರಬರಾಜು ಮಾಡುವ ಪೈಪ್​​ಲೈನ್ ಒಡೆದು ಅಡುಗೆ ಅನಿಲ ಸೋರಿಕೆಯಾಗಿದ್ದು, ಸಾರ್ವಜನಿಕರು ಆತಂಕಗೊಂಡಿದ್ದರು. ಅಲ್ಲದೇ ಭಾರೀ ಪ್ರಮಾಣದಲ್ಲಿ ಎದ್ದಿರುವ ಧೂಳಿನಿಂದ ಜನರು ಮತ್ತಷ್ಟು ಭಯಗೊಂಡಿದ್ದರು.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಅನಿಲ ಸೋರಿಕೆಯಾಗುವುದನ್ನ ನಿಲ್ಲಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಇದರಿಂದ ಸ್ಥಳೀಯರು ನಿಟ್ಟುಸಿರು ಬಿಡುವಂತಾಯಿತು.

ABOUT THE AUTHOR

...view details