ಹುಬ್ಬಳ್ಳಿ :ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹುಬ್ಬಳ್ಳಿ ಕೇಶ್ವಾಪುರ ಟ್ರಾಫಿಕ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಾಗೇಶ್ ಕಾಡದೇವರಮಠ ತೀವ್ರವಾಗಿ ಗಾಯಗೊಂಡಿದ್ದರು. ಅವರ ಮನೆಗೆ ಮೂರುಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಸ್ವಾಮೀಜಿಗಳ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಮುಖಂಡರಾದ ಬಂಗಾರೇಶ ಹಿರೇಮಠ, ರಾಜಶೇಖರ ಮೆಣಸಿನಕಾಯಿ,ಪ್ರಕಾಶ ಗೌಡ ಪಾಟೀಲ್,ಸುರೇಶ್ ಸವಣೂರು ಹಾಗೂ ಅಲ್ಪಸಂಖ್ಯಾತ ಮುಖಂಡರುಗಳಾದ ಬಾಬಾಜಾನ್ ಮುಧೋಳ್, ಫಾರೂಖ್ ಅಬ್ಬುನವರ ಅವರನ್ನು ಒಳಗೊಂಡ ನಿಯೋಗ ಭೇಟಿ ನೀಡಿ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿತು.