ಧಾರವಾಡ: ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಧಾರವಾಡ ಕೃಷಿ ವಿವಿಯಲ್ಲಿರುವ ಉತ್ತರ ಕರ್ನಾಟಕ ಹವಾಮಾನ ಮುನ್ಸೂಚನಾ ಕೇಂದ್ರ ಮಾಹಿತಿ ನೀಡಿದೆ.
ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ - Heavy rain expected over Uttara Karnataka
ಇಂದು ಮತ್ತು ನಾಳೆ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಉತ್ತರ ಕರ್ನಾಟಕ ಹವಾಮಾನ ಮುನ್ಸೂಚನಾ ಕೇಂದ್ರ ಮಾಹಿತಿ ನೀಡಿದೆ.
ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ
ಇಂದು ಮತ್ತು ನಾಳೆ ಮಳೆ ಸಾಧ್ಯತೆಯ ಬಗ್ಗೆ ಹವಾಮಾನ ಮುನ್ಸೂಚನೆ ಕೇಂದ್ರ ಬುಲೆಟಿನ್ವೊಂದನ್ನು ಬಿಡುಗಡೆ ಮಾಡಿದೆ. ಈಗಾಗಲೇ ಧಾರವಾಡ, ವಿಜಯಪುರ, ರಾಯಚೂರು, ಗದಗ, ಹಾವೇರಿ, ಕೊಪ್ಪಳ, ಬಾಗಲಕೋಟೆ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಹಾಗೂ ಬೆಳಗಾವಿ, ಬೀದರ್, ಕಲಬುರಗಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದೆ.
ಕೆಲವು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದ್ದು, ರೆಡ್ ಅಲರ್ಟ್ ಘೋಷಣೆಯಾಗುವ ಸಾಧ್ಯತೆಯಿದೆ.