ಕರ್ನಾಟಕ

karnataka

ETV Bharat / city

ರೋಗಿಯನ್ನು ವಾರ್ಡ್​ಗೆ ಶಿಫ್ಟ್ ಮಾಡಲು ಹಣಕ್ಕೆ ಬೇಡಿಕೆಯಿಟ್ಟ ಜಿಲ್ಲಾಸ್ಪತ್ರೆ ಸಿಬ್ಬಂದಿ: ವಿಡಿಯೋ - Dharwad District hospital

ರೋಗಿಯನ್ನು ವಾರ್ಡ್‌ಗೆ ಶಿಫ್ಟ್‌ ಮಾಡಲು ಧಾರವಾಡ ಜಿಲ್ಲಾಸ್ಪತ್ರೆ ಸಿಬ್ಬಂದಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಆಸ್ಪತ್ರೆ ಸಿಬ್ಬಂದಿ ಹಣ ಕೇಳುವಾಗ ರೋಗಿ ಸಂಬಂಧಿ ವಿಡಿಯೋ ಮಾಡಿಕೊಂಡಿದ್ದು, ಇದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

hospital staff
ಹಣಕ್ಕೆ ಬೇಡಿಕೆಯಿಟ್ಟ ಜಿಲ್ಲಾಸ್ಪತ್ರೆ ಸಿಬ್ಬಂದಿ

By

Published : Oct 6, 2021, 12:44 PM IST

ಧಾರವಾಡ: ಸರ್ಕಾರಿ ಆಸ್ಪತ್ರೆ ಅಂದ್ರೆ ಬಡವರಿಗೆ ಸಂಜೀವಿನಿ. ಆದ್ರೆ, ಧಾರವಾಡ ಜಿಲ್ಲಾಸ್ಪತ್ರೆ ಸಿಬ್ಬಂದಿ ರೋಗಿಯನ್ನು ವಾರ್ಡ್‌ಗೆ ಶಿಫ್ಟ್ ಮಾಡಲು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಹೊಟ್ಟೆ ನೋವು ಕಂಡುಬಂದ ಹಿನ್ನೆಲೆಯಲ್ಲಿ ಗರಗ ಮೂಲದ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೊಟ್ಟೆಯೊಳಗೆ ಗಂಟು ಇದ್ದ ಕಾರಣ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಶಸ್ತ್ರಚಿಕಿತ್ಸೆ ಬಳಿಕ ವಾರ್ಡ್‌ಗೆ ರೋಗಿಯನ್ನು ಶಿಫ್ಟ್ ಮಾಡುವಾಗ ಆಸ್ಪತ್ರೆ ಸಿಬ್ಬಂದಿ ಹಣಕ್ಕೆ ಬೇಡಿಕೆ ಇಟ್ಟಿದ್ದನ್ನು ರೋಗಿಯ ಸಂಬಂಧಿಕರು ವಿಡಿಯೋ ಮಾಡಿಕೊಂಡಿದ್ದಾರೆ.

ಹಣಕ್ಕೆ ಬೇಡಿಕೆಯಿಟ್ಟ ಜಿಲ್ಲಾಸ್ಪತ್ರೆ ಸಿಬ್ಬಂದಿ ವಿಡಿಯೋ

ವಿಡಿಯೋದಲ್ಲಿ ಮಹಿಳೆಯೊಬ್ಬರು ಆಯಾಗಳಿಗೆ ತಲಾ 200 ರೂ. ಹಾಗೂ ಇಬ್ಬರು ನರ್ಸ್​ಗಳಿಗೆ ತಲಾ 600ರೂ‌. ನೀಡುವಂತೆ ಕೇಳಿದ್ದಾರೆ. 'ನೀವು ಖಾಸಗಿ ಆಸ್ಪತ್ರೆಗೆ ಹೋಗಿದ್ರೆ ಸಾವಿರಾರು ರೂಪಾಯಿ ಆಗುತ್ತಿತ್ತು. ಇಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗಿದೆ. ಆ ಖುಷಿಗಾದರೂ ಹಣ ಕೊಡಿ' ಎಂದು ನರ್ಸ್ ವಿಡಿಯೋದಲ್ಲಿ ಹೇಳಿದ್ದಾರೆ.

ABOUT THE AUTHOR

...view details