ಕರ್ನಾಟಕ

karnataka

ETV Bharat / city

ಹುಬ್ಬಳ್ಳಿ ಗಲಭೆ ಪ್ರಕರಣ: ಮೌಲ್ವಿ ಮೌಲಾನಾ ವಾಸೀಂ ಪಠಾಣ್ ಪೊಲೀಸ್ ವಶಕ್ಕೆ - ವಾಸಿಂ ಪಠಾಣ್‌ ಬಂಧನ

ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ಆವರಣದಲ್ಲಿ ಕಳೆದ ಶನಿವಾರ ರಾತ್ರಿ ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧ ಮೌಲ್ವಿ ಮೌಲಾನಾ ವಾಸೀಂ ಪಠಾಣ್​ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Hubballi riot Case
Hubballi riot Case

By

Published : Apr 21, 2022, 3:59 PM IST

Updated : Apr 21, 2022, 7:19 PM IST

ಹುಬ್ಬಳ್ಳಿ:ಹುಬ್ಬಳ್ಳಿಯ ಗಲಭೆ ಪ್ರಕರಣದ ಆರೋಪಿ ಮೌಲ್ವಿ ಮೌಲಾನಾ ವಾಸೀಂ ಪಠಾಣ್​ ಅವರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ಆರಂಭಿಸಿದ್ದಾರೆ. ಬೆಂಗಳೂರಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆಗೆ ಕರೆತರಲಾಗಿದೆ.

ತೀವ್ರ ವಿಚಾರಣೆ:ವಾಸೀಂ ಪಠಾಣ್ ಅವರನ್ನು ಹುಬ್ಬಳ್ಳಿಯ ಇಬ್ಬರು ಡಿಸಿಪಿಗಳು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಡಿಸಿಪಿ ಸಾಹಿಲ್ ಬಾಗ್ಲಾ ಹಾಗೂ ಗೋಪಾಲ ಬ್ಯಾಕೋಡ್ ನೇತೃತ್ವದಲ್ಲಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಸುಮಾರು ಎರಡು ಗಂಟೆಗೂ ಅಧಿಕ ಕಾಲ ವಿಚಾರಣೆ ನಡೆಯುತ್ತಿದೆ. ವಿಚಾರಣೆ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.

ಮೌಲ್ವಿ ಮೌಲಾನಾ ವಾಸೀಂ ಪಠಾಣ್ ಪೊಲೀಸ್ ವಶಕ್ಕೆ

ಶನಿವಾರ ರಾತ್ರಿ ಗಲಭೆ ವೇಳೆಯಲ್ಲಿ ಪೊಲೀಸ್ ಜೀಪ್ ಹತ್ತಿ ಸಮುದಾಯದ ಯುವಕರಿಗೆ ಪ್ರಚೋದನೆ ನೀಡಿರುವ ಗಂಭೀರ ಆರೋಪ ವಾಸೀಂ ಪಠಾಣ್ ಮೇಲಿದೆ. ಅಲ್ಲದೇ ಗಲಭೆ ಬಳಿಕ ಇವರು ನಾಪತ್ತೆಯಾಗಿದ್ದರು. ಆದರೆ ಇಂದು ವಿಡಿಯೋ‌ವೊಂದನ್ನು ಬಿಡುಗಡೆ ಮಾಡಿ ಮಾತನಾಡಿ, ಘಟನೆಗೆ ನಾನು ಕಾರಣನಲ್ಲ. ನನ್ನ ಮೇಲೆ ವ್ಯವಸ್ಥಿತ ಪಿತೂರಿ ನಡೆದಿದೆ. ಘಟನೆಗೆ ಮಾಸ್ಟರ್ ಮೈಂಡ್ ಅಲ್ಲ. ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ಹುಬ್ಬಳ್ಳಿಯ ವಾತಾವರಣ ಹದಗೆಡಿಸುವ ಉದ್ದೇಶ ನನ್ನದಾಗಿರಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ನನ್ನ ವಿರುದ್ಧ ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದಿದ್ದರು.‌

ನಮ್ಮ ಧರ್ಮಕ್ಕೆ ಅಪಮಾನ ಮಾಡಿದ ಬಗ್ಗೆ ಮುಸ್ಲಿಂ ಯುವಕರಲ್ಲಿ ಅಸಮಾಧಾನ ಇತ್ತು. ಈ ಕುರಿತು ದೂರು ನೀಡಲು ಹಲವಾರು ಯುವಕರು ಅಲ್ಲಿ ಜಮಾಯಿಸಿದ್ದರು. ಜನರ ಜೊತೆಗೆ ಮಾತನಾಡಲು ನನ್ನನ್ನು ಕರೆಸಿದ್ದರು. ಪೊಲೀಸರ ಜೊತೆಗೆ ಮಾತನಾಡಿದೆ. ಪೊಲೀಸರು ಸಹಕಾರ ಕೊಟ್ಟಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಪೊಲೀಸರೇ ಜೀಪ್ ಹತ್ತಿ ಜನರಿಗೆ ತಿಳಿ ಹೇಳಲು ಹೇಳಿದರು. ನಾನು ವಾಹನದ ಮೇಲೆ ಹತ್ತಿದಾಗ ಅಲ್ಲಿ ಮೈಕ್ ಇರಲಿಲ್ಲ. ಹೀಗಾಗಿ ಕೈ ಸನ್ನೆ ಮಾಡುವ ಮೂಲಕ ಶಾಂತಿ ಕಾಪಾಡಲು ಹೇಳಿದೆ ಎಂದು ಇಂದು ಬಿಡುಗಡೆ ಮಾಡಿದ ವಿಡಿಯೋದಲ್ಲಿ ಹೇಳಿದ್ದಾರೆ.

(ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲು ಸಂಚು.. ಮೌಲ್ವಿ ವಾಸಿಂ ಪಠಾಣ್ ವಿಡಿಯೋ ಬಿಡುಗಡೆ)

Last Updated : Apr 21, 2022, 7:19 PM IST

ABOUT THE AUTHOR

...view details