ಹುಬ್ಬಳ್ಳಿ:ಹಳೇಹುಬ್ಬಳ್ಳಿ ಗಲಭೆ ಪ್ರಕರಣ ಸಂಬಂಧ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಎಐಎಂಐಎಂ ಕಾರ್ಪೊರೇಟರ್ ನಜೀರ್ ಅಹ್ಮದ್ ಹೊನ್ಯಾಳ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಬಳಿಕ ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಕಾರ್ಪೋರೇಟರ್ನನ್ನು ಬಂಧಿಸಲಾಗಿದೆ.
ಇಂದು ಮಧ್ಯಾಹ್ನ ಪ್ರಕರಣ ಸಂಬಂಧ ಕಾರ್ಪೊರೇಟರ್ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. ಈ ವೇಳೆ ಅನುಮಾನ ಮೂಡಿದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಆ ಬಳಿಕ ಕಿಮ್ಸ್ನಲ್ಲಿ ಕಾರ್ಪೊರೇಟರ್ ಆರೋಗ್ಯ ತಪಾಸಣೆ ನಡೆಸಲಾಯಿತು.