ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ರಸ್ತೆ ದುರಸ್ತಿಗೆ ಸರ್ಕಾರ ಈವರೆಗೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ರಸ್ತೆ ಮಧ್ಯೆ ಗಣ ಹೋಮ ಮಾಡುವ ಮೂಲಕ ಕಾಂಗ್ರೆಸ್ ಮುಖಂಡರು ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ: ರಸ್ತೆ ಮಧ್ಯೆ ಗಣ ಹೋಮ ಮಾಡಿ ಕಾಂಗ್ರೆಸ್ನಿಂದ ವಿನೂತನ ಪ್ರತಿಭಟನೆ - ರಸ್ತೆ ಮಧ್ಯೆ ಗಣ ಹೋಮ ಮಾಡುವ ಮೂಲಕ ಕಾಂಗ್ರೆಸ್ನಿಂದ ವಿನೂತನ ಪ್ರತಿಭಟನೆ
ಅನೇಕ ಬಾರಿ ರಸ್ತೆ ದುರಸ್ತಿ ಮಾಡುವಂತೆ ಮನವಿ ಮಾಡಿದ್ದೇವೆ. ಆದರೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾರಿಕೆ ಉತ್ತರ ನೀಡುತ್ತಿದ್ದಾರೆಯೇ ವಿನಃ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರು ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿಯ ಕೊಪ್ಪಿಕರ ರಸ್ತೆಯಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು, ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈಗಾಗಲೇ ಅನೇಕ ಬಾರಿ ರಸ್ತೆಗಳ ದುರಸ್ತಿ ಮಾಡುವಂತೆ ಮನವಿ ಮಾಡಿದ್ದೇವೆ. ಆದರೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾರಿಕೆ ಉತ್ತರ ನೀಡುತ್ತಿದ್ದಾರೆಯೇ ವಿನಃ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೈ ಕಾರ್ಯಕರ್ತರು ಆರೋಪಿಸಿದರು.
ಕಳೆದ ಎರಡು ವರ್ಷದಿಂದ ರಸ್ತೆಗಳು ಹಾಳಾಗಿದ್ದು, ಸ್ಮಾರ್ಟ್ ಸಿಟಿ ಯೋಜನೆ ಅನುದಾನ ಬಂದರೂ ಕೂಡ ಅಭಿವೃದ್ಧಿಯಾಗುತ್ತಿಲ್ಲ. ನಾಳೆ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವು ಗಣ್ಯರು ಭಾಗಿಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ನಾಯಕರ ಗಮನ ಸೆಳೆಯಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು.
TAGGED:
Hubli road damage