ಹುಬ್ಬಳ್ಳಿ/ಧಾರವಾಡ: ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ಹು-ಧಾ ಮಹಾನಗರ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು.
ಇಂಧನ ಬೆಲೆ ಏರಿಕೆ ಖಂಡಿಸಿ ಹು-ಧಾ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ - undefined
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಹು-ಧಾ ಮಹಾನಗರದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ಸರ್ಕಲ್ನಿಂದ ಚನ್ನಮ್ಮ ವೃತ್ತದವರೆಗೂ ಬೈಕ್ ತಳ್ಳಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಅಲ್ತಾಫ್ ಹಳ್ಳೂರ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ ಸಾರ್ವಜನಿಕರ ಅನುಕೂಲಕ್ಕಾಗಿ ಇಲ್ಲ. ಅದು ಸಾರ್ವಜನಿಕರನ್ನು ಸಂಕಷ್ಟಕ್ಕೆ ಸಿಲುಕಿಸುವ ಹಾಗೂ ಅರ್ಥಿಕ ಹೊರೆಯನ್ನುಂಟು ಮಾಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಮಾತಿನಲ್ಲಿ ಮಾತ್ರ ಜನಪರ ಕಾಳಜಿ ತೋರುತ್ತಿದೆ. ಆದರೆ ಕಾರ್ಯ ರೂಪದಲ್ಲಿ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಕಿಡಿಕಾರಿದರು. ಅಲ್ಲದೇ ಕೃಷಿಗೆ ಹಾಗೂ ರೈತರಿಗೆ ಪೂರಕವಾದ ಯೋಜನೆಯನ್ನು ಬಜೆಟ್ನಲ್ಲಿ ಘೋಷಣೆ ಮಾಡಿಲ್ಲ. ಇದು ನಾಮಮಾತ್ರ ಹಾಗೂ ಜನ ವಿರೋಧಿ ಬಜೆಟ್ ಆಗಿದೆ ಎಂದರು.