ಹುಬ್ಬಳ್ಳಿ :ತಾರಿಹಾಳ ಇಂಡಸ್ಟ್ರಿಯಲ್ ಏರಿಯಾದಲ್ಲಿ ಸ್ಪಾರ್ಕರ್ ತಯಾರಿಕೆ ಘಟಕಕ್ಕೆ ಬೆಂಕಿ ಹೊತ್ತಿದ್ದು, ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭುರಾಮ್ ಹೇಳಿದರು.
ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇಂಡಸ್ಟ್ರಿಯಲ್ ಏರಿಯಾದಲ್ಲಿ ಅಗ್ನಿ ಅವಘಡ ನಡೆದಿದ್ದು, ಎಂಟು ಜನರು ಗಾಯಗೊಂಡಿದ್ದಾರೆ. ಫ್ಯಾಕ್ಟರಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದು, ಪೊಲೀಸ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ ಎಂದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಅಧಿಕಾರಿಗಳ ಕಾರ್ಯ ನ್ಯೂನತೆ ಕಂಡು ಬಂದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಕಂಪನಿ ಬಗ್ಗೆ ಸರಿಯಾದ ಮಾಹಿತಿ ಲಭ್ಯವಾಗಿಲ್ಲ. ಕಂಪನಿಗೆ ಸಂಧಿಸಿದ ದಾಖಲೆಗಳನ್ನು ಹಾಜರು ಪಡಿಸಲು ಹೇಳಿದ್ದೆವೆ. ಈಗಾಗಲೇ ಪೊಲ್ಯೂಷನ್ ಕಂಟ್ರೋಲ್ ಬೋರ್ಡ್ ಅಡಿಯಲ್ಲಿ ಕೇಸ್ ದಾಖಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.
ಅಗ್ನಿ ಅವಘಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕಂಪನಿ ನಿಯಮ ಉಲ್ಲಂಘನೆ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ. ಈ ಬಗ್ಗೆ ಸಂಭಂದಪಟ್ಟವರನ್ನ ವಶಕ್ಕೆ ಪಡೆದು ತನಖೆ ನಡೆಸುತ್ತೆವೆ ಎಂದರು. ಮೇಲ್ನೋಟಕ್ಕೆ ಅಧಿಕೃತ ಎಂದು ಕಂಡು ಬರುತ್ತಿಲ್ಲ. ಎರಡು ಮೂರು ಇಲಾಖೆಯಲ್ಲಿ ಈ ಕಂಪನಿಯ ಸೂಕ್ತ ದಾಖಲೆಗಳು ಕಂಡುಬರುತ್ತಿಲ್ಲ.
ನಾಳೆ ಬೆಳಿಗ್ಗೆ ಒಳಗಡೆ ಎಲ್ಲಾ ದಾಖಲೆಗಳನ್ನು ನೀಡಬೇಕೆಂದು ಸೂಚಿಸಲಾಗಿದೆ. ನಮ್ಮ ಇಲಾಖೆಯ ಅಧಿಕಾರಿಗಳ ಕಾರ್ಯ ನ್ಯೂನತೆ ಕಂಡು ಬಂದರೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೆನೆ ಎಂದು ಅವರು ಹೇಳಿದರು.