ಹುಬ್ಬಳ್ಳಿ:ಲಾಕ್ಡೌನ್ ಹಿನ್ನೆಲೆಯಲ್ಲಿ ಅವಳಿ ನಗರಗಳಲ್ಲಿ ಜನರು ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ತರಕಾರಿ ಖರೀದಿಗೆ ಮುಗಿಬಿದ್ದಿದ್ದು, ವ್ಯಾಪಾರಿಗಳನ್ನು ಪಾಲಿಕೆ ಸಿಬ್ಬಂದಿ ಬಿಸಿ ಮುಟ್ಟಿಸಿದ್ದಾರೆ.
ಕೋವಿಡ್ ನಿಯಮ ಮರೆತು ತರಕಾರಿ ಖರೀದಿಗೆ ಮುಗಿಬಿದ್ದ ಜನ: ವ್ಯಾಪಾರಿಗಳ ತೆರವುಗೊಳಿಸಿದ ಪಾಲಿಕೆ - ಹುಬ್ಬಳ್ಳಿ ಲಾಕ್ಡೌನ್
ಹುಬ್ಬಳ್ಳಿಯ ಸರಾಫಗಟ್ಟಿ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಎಲ್ಲೆಂದರಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳನ್ನು ಪಾಲಿಕೆ ಸಿಬ್ಬಂದಿ ತೆರವುಗೊಳಿಸಿದ್ದಾರೆ.
ಲಾಕ್ಡೌನ್
ಹುಬ್ಬಳ್ಳಿಯಲ್ಲಿ ಲಾಕ್ಡೌನ್ ಘೋಷಣೆಯಾಗಿದ್ದು, ಮಧ್ಯಾಹ್ನ 12 ಗಂಟೆಯ ವರೆಗೆ ಮಾತ್ರ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ನಗರದ ಸರಾಫಗಟ್ಟಿ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಎಲ್ಲೆಂದರಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳನ್ನು ಪಾಲಿಕೆ ಸಿಬ್ಬಂದಿ ತೆರವುಗೊಳಿಸಿದ್ದಾರೆ.
ಪಾಲಿಕೆ ಅಧಿಕಾರಿಗಳ ಆದೇಶದ ಮೇರೆಗೆ ವ್ಯಾಪಾರಸ್ಥರು ಆಟೋ, ಟ್ರ್ಯಾಕ್ಟರ್ಗಳಲ್ಲಿ ತರಕಾರಿ ತುಂಬಿಕೊಂಡು ಹೋಗಿದ್ದಾರೆ.