ಹುಬ್ಬಳ್ಳಿ (ಧಾರವಾಡ):ಪ್ರಾರ್ಥನಾ ಸ್ಥಳವೊಂದರ ಮೇಲೆ ಧ್ವಜವೊಂದನ್ನು ಹಾರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ಆವರಣದಲ್ಲಿ ಕಲ್ಲು ತೂರಾಟ ನಡೆದಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದ್ದು, ಪೊಲೀಸರು ಪಥ ಸಂಚಲನ ನಡೆಸಿದ್ದಾರೆ.
ಹುಬ್ಬಳ್ಳಿ ಗಲಭೆ: ನಗರದಲ್ಲಿ ಬಿಗಿ ಭದ್ರತೆ, ಪೊಲೀಸ್ ಪಥ ಸಂಚಲನ - ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ
ಹುಬ್ಬಳ್ಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದ್ದು, ಹುಬ್ಬಳ್ಳಿ-ಧಾರವಾಡ ಪೊಲೀಸರು ಪಥ ಸಂಚಲನ ನಡೆಸಿದರು.
ಹುಬ್ಬಳ್ಳಿಯಲ್ಲಿ ಪೊಲೀಸ್ ಪಥ ಸಂಚಲನ
ಯುವಕನೊಬ್ಬ ಹರಿಬಿಟ್ಟ ವಿಡಿಯೋ ಹುಬ್ಬಳ್ಳಿಯಲ್ಲಿ ಅಶಾಂತಿಯ ವಾತಾವರಣ ನಿರ್ಮಿಸಿದೆ. ಈ ಹಿನ್ನೆಲೆಯಲ್ಲಿ ಹು-ಧಾ ಪೊಲೀಸ್ ಕಮಿಷನರೇಟ್ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ನಗರದ ಆಯಕಟ್ಟಿನ ಪ್ರದೇಶಗಳಾದ ಬಂಕಾಪೂರ ಚೌಕ್, ನ್ಯೂ ಇಂಗ್ಲಿಷ್ ಸ್ಕೂಲ್, ಕಮರಿಪೇಟೆ ಸೇರಿದಂತೆ ಹಳೇ ಹುಬ್ಬಳ್ಳಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಪಥ ಸಂಚಲನ ನಡೆಸಿದರು.
Last Updated : Apr 17, 2022, 7:21 PM IST