ಹುಬ್ಬಳ್ಳಿ: ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್ ನಡೆಯುತ್ತಿದೆ. ಕಲಘಟಗಿಯಲ್ಲಿ ಪೊಲೀಸ್ ಇಲಾಖೆ ಹಾಗೂ ಪಟ್ಟಣ ಪಂಚಾಯತಿ ಹಾಗು ಯುವಕರ ಗುಂಪಿನ ಸಹಾಯದಿಂದ ಆಸ್ಪತ್ರೆ ಹಾಗೂ ಅಗತ್ಯವಸ್ತು ಖರೀದಿಸುವ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಸಾಮಾಜಿಕ ಅಂತರದ ಮಹತ್ವ ತಿಳಿಸಲಾಗುತ್ತಿದೆ.
ಡಂಗುರ ಸಾರುವ ಮೂಲಕ ಕೊರೊನಾ ಕುರಿತು ಸಾರ್ವಜನಿಕರಲ್ಲಿ ಜಾಗೃತಿ - ಪೊಲೀಸ್ ಠಾಣೆಯಿಂದ ಡಂಗುರ ಹೊಡೆಸುವ ಮೂಲಕ ಕೊರೊನಾ ಕುರಿತು ಸಾರ್ವಜನಿಕರಲ್ಲಿ ಜಾಗೃತಿ
ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಈಗಾಗಲೇ 21 ದಿನಗಳ ಲಾಕ್‌ಡೌನ್ ಘೋಷಿಸಿದೆ. ಈ ಕಾಲಾವಧಿಯಲ್ಲಿ ಜನರು ಕಾಲ ತಮ್ಮ ಮನೆಗಳಿಂದ ಹೊರಬರಬಾರದೆಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಈ ನಡುವೆ ಸಾರ್ವಜನಿಕರು ಅಗತ್ಯ ವಸ್ತುಗಳ ಖರೀದಿಗಾಗಿ ಹೊರಬಂದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ತಿಳಿಸಿದೆ.
ಹುಬ್ಬಳ್ಳಿ: ಪೊಲೀಸ್ ಠಾಣೆಯಿಂದ ಡಂಗುರ ಹೊಡೆಸುವ ಮೂಲಕ ಕೊರೊನಾ ಕುರಿತು ಸಾರ್ವಜನಿಕರಲ್ಲಿ ಜಾಗೃತಿ
ಆಸ್ಪತ್ರೆ, ಬ್ಯಾಂಕ್ ಎಟಿಎಂ, ಮೆಡಿಕಲ್ ಶಾಪ್, ತರಕಾರಿ ಖರೀದಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಾಕ್ಸ್ ಹಾಕಲಾಗಿದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲಾಯಿತು.
ಅಲ್ಲದೇ, ಕಲಘಟಗಿ ಪೊಲೀಸ್ ಠಾಣೆಯಿಂದ ಡಂಗುರ ಹೊಡೆಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.