ಕರ್ನಾಟಕ

karnataka

ETV Bharat / city

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ: ಎಫ್​ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ - violence in hubli police station

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಸಂಬಂಧ ಎಫ್​ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ
ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ

By

Published : Jun 14, 2022, 7:45 AM IST

ಧಾರವಾಡ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಎಫ್​ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾಗೊಳಿಸಿದೆ. ಗಲಭೆ ಸಂಬಂಧ ಪೊಲೀಸರು 12 ಎಫ್​ಐಆರ್ ದಾಖಲಿಸಿದ್ದರು. ಆದರೆ, ಈ ಪೈಕಿ 11 ಎಫ್​ಐಆರ್ ರದ್ದುಪಡಿಸಿ ಎಂದು ಆರೋಪಿಗಳ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಬಗ್ಗೆ ಮೇ 17 ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್​, 11 ಎಫ್​ಐಆರ್​ಗಳಿಗೆ ಮಧ್ಯಂತರ ತಡೆ ನೀಡಿತ್ತು. ಬಳಿಕ ಪೊಲೀಸರು, ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಸೋಮವಾರ ಪೊಲೀಸರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತಡೆಯಾಜ್ಞೆ ತೆರವುಗೊಳಿಸಿದೆ. ಜೊತೆಗೆ ಆರೋಪಿಗಳ ಎಫ್​ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಏ. 16 ರಂದು ಹಳೇ ಹುಬ್ಬಳ್ಳಿ ಠಾಣೆ ಎದುರು ನಡೆದ ದೊಡ್ಡ ಗಲಭೆ ಸಂಬಂಧ 158 ಜನರ ಮೇಲೆ ಒಟ್ಟು 12 ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದರು. 158 ಆರೋಪಿಗಳನ್ನು ಬಂಧಿಸಿ, ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಕಳಿಸಿದ್ದರು. 12 ಪ್ರಕರಣಗಳ ಪೈಕಿ 11 ಎಫ್​​ಐಆರ್ ವಿರುದ್ಧ ಆರೋಪಿಗಳ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು.

(ಇದನ್ನೂ ಓದಿ:ಹುಬ್ಬಳ್ಳಿ ಗಲಭೆ ಪ್ರಕರಣ: ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆಗೆ ಯತ್ನ!)

ABOUT THE AUTHOR

...view details