ಹುಬ್ಬಳ್ಳಿ: ನಗರದ ಚೆನ್ನಮ್ಮ ಸರ್ಕಲ್ ಬಳಿಯಿರುವ 'ಜನತಾ ಬಜಾರ್' ಮಾರುಕಟ್ಟೆಯನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಆಯ್ಕೆಯಾಗಿದ್ದು, ಇಲ್ಲಿನ ವ್ಯಾಪಾರಸ್ಥರಿಗೆ ಬೇರೆಡೆ ವ್ಯಾಪಾರಕ್ಕೆ ಮಹಾನಗರ ಪಾಲಿಕೆ ವ್ಯವಸ್ಥೆ ಮಾಡಿಕೊಟ್ಟಿದೆ. ಆದರೆ, ಅಲ್ಲಿರುವ ಅವ್ಯವಸ್ಥೆ ಕಂಡು ವ್ಯಾಪಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 18.35 ಕೋಟಿ ರೂ. ವೆಚ್ಚದಲ್ಲಿ 'ಜನತಾ ಬಜಾರ್' ಮಾರುಕಟ್ಟೆಯನ್ನು ಹೊಸದಾಗಿ ನಿರ್ಮಿಸಲು ಮಹಾನಗರ ಪಾಲಿಕೆ ಮುಂದಾಗಿದ್ದು, ಇಲ್ಲಿನ ವ್ಯಾಪಾರ ಸಂಪೂರ್ಣ ಸ್ಥಗಿತಗೊಂಡಿದೆ. ಇಲ್ಲಿನ ವ್ಯಾಪಾರಸ್ಥರಿಗೆ ಹೊಸೂರ್ ಸರ್ಕಲ್ ಬಳಿ ವ್ಯಾಪಾರಕ್ಕೆ ಮಹಾನಗರ ಪಾಲಿಕೆ ವ್ಯವಸ್ಥೆ ಮಾಡಿಕೊಟ್ಟಿದೆ. ಆದರೆ, ಅಲ್ಲಿನ ಅವ್ಯವಸ್ಥೆ ಕಂಡು ವ್ಯಾಪಾರಸ್ಥರು ಹೈರಾಣಾಗಿದ್ದಾರೆ.