ಹುಬ್ಬಳ್ಳಿ:ನಾನು ಸಂವಿಧಾನ ದುರುಪಯೋಗ ಮಾಡಿಕೊಂಡಿದ್ದೇನೆಂದು ನನ್ನ ಸ್ನೇಹಿತರು ಅಪಪ್ರಚಾರ ಮಾಡುತ್ತಿದ್ದಾರೆ. ಶಿಕ್ಷಕರು ನನ್ನ ಮೇಲಿಟ್ಟಿರುವ ಒಲವು ಅವರಿಗೆ ಸಹಿಸಲಾಗುತ್ತಿಲ್ಲ, ಹೀಗಾಗಿ ಅವರು ವಿಚಲಿತರಾಗಿ ಇಲ್ಲ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.
ನಗರದಲ್ಲಿಂದು ಕೊನೆ ಹಂತದ ಪ್ರಚಾರದ ವೇಳೆ ಮಾತನಾಡಿದ ಅವರು, ನನ್ನಿಂದ ಯಾರಿಗಾದರೂ ಅನ್ಯಾಯವಾಗಿದ್ದರೆ, ದಾಖಲೆ ಸಮೇತ ಸಾಬೀತು ಮಾಡಲಿ. ಬಹಿರಂಗ ಚರ್ಚೆಗೆ ನಾನು ಸಿದ್ಧ. ನನ್ನ ಮೇಲಿನ ಆರೋಪಗಳು ಸಾಬೀತಾದರೆ ಚುನಾವಣೆಯಿಂದ ನಾನು ಹಿಂದೆ ಸರಿಯುತ್ತೇನೆ. ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದರು.