ಧಾರವಾಡ:ವಿಜಯಪುರ ಜಿಲ್ಲಾಧಿಕಾರಿಯಾಗಿ ಸೋಮವಾರ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಇಂದು ಅಧಿಕಾರ ಸ್ವೀಕರಿಸಲು ಹೊರಟಿದ್ದ ವಿಜಯ ಮಹಾಂತೇಶ ದಾನಮ್ಮನವರ ಅವರ ಕಾರು ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಐಎಎಸ್ ಅಧಿಕಾರಿ ಸಮೇತ ಐವರು ಗಾಯಗೊಂಡಿದ್ದಾರೆ. ಧಾರವಾಡ ತಾಲೂಕಿನ ಯರಿಕೊಪ್ಪ ಬಳಿಯ ರಾಷ್ಟ್ರಿಯ ಹೆದ್ದಾರಿ 4 ರಲ್ಲಿ ಘಟನೆ ನಡೆದಿದೆ.
ಕಾರಿನಲ್ಲಿ ಸಂಚರಿಸುತ್ತಿದ್ದ ಮಹಾಂತೇಶ ದಾನಮ್ಮನವರ, ಅವರ ಪತ್ನಿ ಶ್ವೇತಾ ಹಾಗೂ ಮಕ್ಕಳಾದ ತನ್ವಿ, ವಿಹಾನ್ ಮತ್ತು ಚಾಲಕ ಪ್ರವೀಣ ಕುಮಾರಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.