ಕರ್ನಾಟಕ

karnataka

ETV Bharat / city

ಕಾನೂನು ಉಲ್ಲಂಘನೆ ಮಾಡಿದ್ರೆ ಸೂಕ್ತ ಕ್ರಮ: ಪೊಲೀಸ್ ಆಯುಕ್ತ ಲಾಬೂರಾಮ್

ಧಾರವಾಡದಲ್ಲಿ ರಸ್ತೆ ತಡೆದು ಬಂದ್ ಮಾಡಲು ಮುಂದಾಗಿರುವ 24 ಮಂದಿ ಪ್ರತಿಭಟನಾಕಾರರನ್ನು ಬಂಧನ ಮಾಡಲಾಗಿದೆ. ಪ್ರತಿಭಟನೆ ವೇಳೆ ಯಾರಾದರೂ ಕಾನೂನು ನಿಯಮ ಉಲ್ಲಂಘಿಸಿದರೆ ಅಂಥವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಆಯುಕ್ತ ಲಾಬೂರಾಮ್ ಎಚ್ಚರಿಕೆ ನೀಡಿದರು.

Police Commissioner Laburam
ಪೊಲೀಸ್ ಆಯುಕ್ತ ಲಾಬೂರಾಮ್

By

Published : Dec 5, 2020, 12:37 PM IST

ಹುಬ್ಬಳ್ಳಿ: ಮರಾಠ ಅಭಿವೃದ್ದಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಬಂದ್ ನಡೆಸುತ್ತಿದ್ದು, ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಲಾಬೂರಾಮ್ ನಗರದ ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪೊಲೀಸ್ ಆಯುಕ್ತ ಲಾಬೂರಾಮ್

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹು-ಧಾ ಮಹಾನಗರದಲ್ಲಿ ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ‌ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದರು.

ಓದಿ:ಧಾರವಾಡ: ಮರಾಠ ಪ್ರಾಧಿಕಾರ ರಚನೆ ಸ್ವಾಗತಿಸಿ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ

ಈಗಾಗಲೇ ಮೂರು ಕೆ.ಎಸ್.ಆರ್.ಪಿ ತಂಡ ಹಾಗೂ 12 ಸಿಎಆರ್ ಪೊಲೀಸ್ ತಂಡಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಅಲ್ಲದೇ, ಧಾರವಾಡದಲ್ಲಿ ರಸ್ತೆ ತಡೆದು ಬಂದ್ ಮಾಡಲು ಮುಂದಾಗಿರುವ 24 ಮಂದಿ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಯಾರಾದರೂ ಕಾನೂನು ನಿಯಮ ಉಲ್ಲಂಘನೆ ಮಾಡಿದರೆ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ABOUT THE AUTHOR

...view details