ಹುಬ್ಬಳ್ಳಿ: ನಗರದ ಪಿಂಟೋ ಸರ್ಕಲ್ ಬಳಿ ಅಕ್ರಮವಾಗಿ ಆಟೋದಲ್ಲಿ ಸಾಗಿಸುತ್ತಿದ್ದ ಗೋವಾ ಮದ್ಯವನ್ನು ವಶಪಡಿಸಿಕೊಳ್ಳವಲ್ಲಿ ಹುಬ್ಬಳ್ಳಿ-ಧಾರವಾಡ ಅಬಕಾರಿ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಲಕ್ಷಗಟ್ಟಲೇ ಮೌಲ್ಯದ ಅಕ್ರಮ ಗೋವಾ ಮದ್ಯ ಹುಬ್ಬಳ್ಳಿಯಲ್ಲಿ ವಶ - illegal liquor seized
ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯವನ್ನು ಅಬಕಾರಿ ಇಲಾಖೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.
liquor
ಸಾತ್ರೈನ್, ಅಮಿತ್ ಗಾಗಡೆ ಬಂಧಿತ ಆರೋಪಿಗಳು. ಬಂಧಿತರಿಂದ ಸುಮಾರು ಒಂದು ಲಕ್ಷದ ಅರವತ್ತು ಸಾವಿರ ಮೌಲ್ಯದ 21.75 ಲೀಟರ್ ಮದ್ಯವನ್ನು ಹುಬ್ಬಳ್ಳಿ ವಲಯದ ಅಬಕಾರಿ ಇನ್ಸ್ಪೆಕ್ಟರ್ ಸುನೀಲ್ ಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದೆ. ಗೋವಾದಿಂದ ಅಕ್ರಮವಾಗಿ ಮದ್ಯ ತಂದು ಮಾರಾಟ ಮಾಡುತ್ತಿದ್ದರು ಎನ್ನಲಾಗ್ತಿದೆ.
ಬೆಳಗಾವಿ ವಿಭಾಗದ ಜಂಟಿ ಅಬಕಾರಿ ಆಯುಕ್ತ ಡಾ. ವೈ. ಮಂಜುನಾಥ ಹಾಗೂ ಧಾರವಾಡ ಜಿಲ್ಲಾ ಅಬಕಾರಿ ಉಪ ಆಯುಕ್ತ ಶಿವನಗೌಡ ಅವರ ನಿರ್ದೇಶನದ ಮೇರೆಗೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.