ಹುಬ್ಬಳ್ಳಿ(ಧಾರವಾಡ): ಬ್ಯಾಂಕ್ ಖಾತೆಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳದಿದ್ದರೂ ವ್ಯಕ್ತಿಯೊಬ್ಬರ ಖಾತೆಯಿಂದ 97,500 ರೂ. ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಆರೋಪದಡಿ ಹುಬ್ಬಳ್ಳಿ-ಧಾರವಾಡ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಣ್ಣಿಗೇರಿ ತಾಲೂಕು ನಲವಡಿ ಗ್ರಾಮದ ನಾಗಪ್ಪ ನರಗುಂದ ವಂಚನೆಗೊಳಗಾದ ಗ್ರಾಹಕ. ಇವರು ಬ್ಯಾಂಕ್ ಖಾತೆ ಹಾಗೂ ಎಟಿಎಂ ಕಾರ್ಡ್‌ನ ಯಾವುದೇ ವಿವರವನ್ನು ಯಾರಿಗೂ ನೀಡಿರಲಿಲ್ಲ. ಯಾವುದೇ ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನೂ ಹೊಂದಿರಲಿಲ್ಲ ಎನ್ನಲಾಗ್ತಿದೆ.