ಹುಬ್ಬಳ್ಳಿ: ಪೊಲೀಸ್ ಸಿಬ್ಬಂದಿಯ ಸುರಕ್ಷತೆಗೆ ಹೆಚ್ಚಿನ ಆದ್ಯತೆ ಕೊಡಲಾಗುತ್ತಿದೆ. ಪೊಲೀಸ್ ಸಿಬ್ಬಂದಿಗೆ ಹೆಚ್ಚಿನ ಮಾನಸಿಕ ಒತ್ತಡ ಹಾಕುವುದಿಲ್ಲ ಎಂದು ಹುಬ್ಬಳ್ಳಿ - ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್ ಹೇಳಿದ್ದಾರೆ.
ಪೊಲೀಸರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ಕೊಡಲಾಗುತ್ತಿದೆ: ಹು-ಧಾ ಪೊಲೀಸ್ ಆಯುಕ್ತ - hubli dharwad police commissioner r dileep
ಪೊಲೀಸ್ ಸಿಬ್ಬಂದಿಯ ಸುರಕ್ಷತೆಗೆ ಹೆಚ್ಚಿನ ಆದ್ಯತೆ ಕೊಡಲಾಗುತ್ತಿದೆ ಎಂದು ಹುಬ್ಬಳ್ಳಿ - ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್ ಹೇಳಿದ್ದಾರೆ. ಪೊಲೀಸರ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳ ಕುರಿತು ವಿವರಿಸಿದ್ದಾರೆ.
r dileep
ನಗರಲ್ಲಿಂದು ಮಾತನಾಡಿದ ಅವರು, ಎಲ್ಲಾ ಸಿಬ್ಬಂದಿಯ ಗಂಟಲು ದ್ರವ ಪರೀಕ್ಷೆ ಮಾಡಲಾಗಿದೆ. ಹೈ ರಿಸ್ಕ್ ಏರಿಯಾದಲ್ಲಿ ಕೆಲಸ ಮಾಡುವವರಿಗೆ ಚೆಕ್‌ಅಪ್ ಮಾಡಲಾಗಿದೆ. ಪೊಲೀಸ್ ಠಾಣೆ, ಕ್ವಾಟ್ರಸ್ಗಳನ್ನು ಸ್ಯಾನಿಟೈಸ್ ಮಾಡಲಾಗಿದೆ ಎಂದು ಹೆಳಿದರು.
ಆಯುಷ್ ಇಲಾಖೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಮಾತ್ರೆಗಳನ್ನು ವಿತರಿಸಲಾಗಿದೆ. ಡಿಜಿಯವರು ಪ್ರತಿ ಮೀಟಿಂಗ್‌ನಲ್ಲಿ ಪೊಲೀಸರ ಯೋಗಕ್ಷೇಮದ ಬಗ್ಗೆ ಆದ್ಯತೆ ಕೊಡುವಂತೆ ಹೇಳಿದ್ದಾರೆ. ಕೊರೊನಾ ವಿರುದ್ಧ ಫೈಟ್ ಮಾಡುವ ಜೊತೆಗೆ ಪೊಲೀಸರು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.