ಧಾರವಾಡ: ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶದ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.
ಈಗಾಗಲೆ ಫೆಬ್ರವರಿ 14ರಂದು ಬೆಳಗ್ಗೆ 10-30ರಿಂದ ಸಂಜೆ 5-30ರವರೆಗೆ ಹುಬ್ಬಳ್ಳಿಯ ಡೆನಿಸನ್ಸ್ ಹೋಟೆಲ್‍ನಲ್ಲಿ ನಡೆಯಲಿರುವ ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶಕ್ಕೆ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಹಾವೇರಿ, ಉತ್ತರಕನ್ನಡ, ಗದಗ, ದಾವಣಗೆರೆ ಹಾಗೂ ಕೊಪ್ಪಳ ಜಿಲ್ಲೆಯ ಜಂಟಿ ನಿರ್ದೇಶಕರು, ಆಯಾ ಜಿಲ್ಲೆಯ ಕೈಗಾರಿಕಾ ಸಂಘಗಳು ಭಾಗವಹಿಸಲು ಆಮಂತ್ರಣ ನೀಡಿದ್ದಾರೆ.