ಹುಬ್ಬಳ್ಳಿ: ಪಾಕ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳ ಪ್ರಕರಣ ತನಿಖಾ ಹಂತದಲ್ಲಿ ಇರುವುದರಿಂದ ಈಗಲೇ ಏನು ಹೇಳಲು ಸಾಧ್ಯವಿಲ್ಲ ಎಂದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್ ಹೇಳಿದ್ದಾರೆ.
ಪಾಕ್ ಪರ ಘೋಷಣೆ ಪ್ರಕರಣ: ವಿದ್ಯಾರ್ಥಿಗಳ ಬಿಡುಗಡೆ ಕುರಿತು ಹು-ಧಾ ಪೊಲೀಸ್ ಆಯುಕ್ತರು ಹೇಳಿದ್ದೇನು? - KLE College student pro-Pakistan slogan case
ಪ್ರಕರಣದ ತನಿಖೆ ಮಾಡುತ್ತಿದ್ದೇವೆ, ತನಿಖೆಯನ್ನ ಲಾಜಿಕಲ್ ಎಂಡ್ ಗೆ ತೆಗೆದುಕೊಂಡು ಹೋಗುತ್ತೇವೆ. ನಮ್ಮ ಮೇಲೆ ವಿಶ್ವಾಸವಿಡಿ ಎಂದು ಪಾಕ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳ ಬಿಡುಗಡೆ ಕುರಿತು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್ ಪ್ರತಿಕ್ರಿಯೆ ನೀಡಿದ್ದಾರೆ.
![ಪಾಕ್ ಪರ ಘೋಷಣೆ ಪ್ರಕರಣ: ವಿದ್ಯಾರ್ಥಿಗಳ ಬಿಡುಗಡೆ ಕುರಿತು ಹು-ಧಾ ಪೊಲೀಸ್ ಆಯುಕ್ತರು ಹೇಳಿದ್ದೇನು? investigation-in-going-on-trust-on-us-r-dilip-kumar](https://etvbharatimages.akamaized.net/etvbharat/prod-images/768-512-6097036-thumbnail-3x2-dilip.jpg)
ಹು- ಧಾ ಪೊಲೀಸ್ ಆಯುಕ್ತ ಆರ್. ದಿಲೀಪ್
ಪಾಕ್ ಪರ ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಿದ್ದನ್ನು ಖಂಡಿಸಿ ಬಜರಂಗದಳ ಸೇರಿದಂತೆ ವಿವಿಧ ಸಂಘಟನೆಯ ಕಾರ್ಯಕರ್ತರು ಗೋಕುಲ್ ರೋಡ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.
ಪಾಕ್ ಪರ ಘೋಷಣೆ ಪ್ರಕರಣ: ವಿದ್ಯಾರ್ಥಿಗಳ ಬಿಡುಗಡೆ ಕುರಿತು ಹು-ಧಾ ಪೊಲೀಸ್ ಆಯುಕ್ತರ ಪ್ರತಿಕ್ರಿಯೆ
ಪ್ರತಿಭಟನಾಕಾರರ ಮನವೊಲಿಸಿದ ಬಳಿಕ ಮಾತನಾಡಿದ ಪೊಲೀಸ್ ಆಯುಕ್ತರು, ಪ್ರಕರಣದ ತನಿಖೆ ಮಾಡುತ್ತಿದ್ದೇವೆ. ಪ್ರಕರಣದ ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ. ನ್ಯಾಯಾಲಯದ ಕೆಲವು ನಿರ್ದೇಶನಗಳು ಇರುವುದರಿಂದ ನಿಮ್ಮ ಮುಂದೆ ಹೇಳಲು ಸಾಧ್ಯವಿಲ್ಲ. ನಮ್ಮ ಮೇಲೆ ವಿಶ್ವಾಸವಿಡಿ ಎಂದು ಹೇಳಿದರು.