ಹುಬ್ಬಳ್ಳಿ: ಸಂಪುಟ ಸೇರಿರುವ ನೂತನ ಸಚಿವರಿಗೆ ಯಾವ ಖಾತೆ ಕೊಡಬೇಕೆಂಬುದು ತೀರ್ಮಾನ ಮಾಡಲಾಗಿದೆ. ಸೋಮವಾರ ಬೆಳಿಗ್ಗೆ ಖಾತೆ ಹಂಚಿಕೆ ಮಾಡಲಾಗುವುದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನೂತನ ಸಚಿವರಿಗೆ ಖಾತೆ ಹಂಚಿಕೆ ಕುರಿತು ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ, ಕಳಸಾ ಯೋಜನೆ ವಿವಾದ ಸುಪ್ರೀಂಕೋರ್ಟ್‌ನಲ್ಲಿದ್ದು, ಶೀಘ್ರ ಇತ್ಯರ್ಥಗೊಳ್ಳುವ ವಿಶ್ವಾಸ ಇದೆ. ಈ ಹಿನ್ನೆಲೆ ಮುಂಬರುವ ಬಜೆಟ್ನಲ್ಲಿ ಹಣ ತೆಗೆದಿರಿಸುವುದಾಗಿ ರಾಜ್ಯ ಸರ್ಕಾರ ಚರ್ಚಿಸಿದೆ. ಮಹದಾಯಿ ವಿಚಾರದ ತೀರ್ಪು ಮತ್ತು ಮೇಲ್ಮನವಿ ಸಲ್ಲಿಕೆ ಕುರಿತು ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸುತ್ತಿದ್ದೇವೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಸಲಾಗುವುದು ಎಂದರು.
ಇನ್ನು ಸಂಪುಟ ಸೇರಿರುವ ನೂತನ ಸಚಿವರಿಗೆ ಯಾವ ಖಾತೆ ಕೊಡಬೇಕೆಂಬುದು ತೀರ್ಮಾನ ಮಾಡಲಾಗಿದೆ. ಸೋಮವಾರ ಬೆಳಿಗ್ಗೆ ಖಾತೆ ಹಂಚಿಕೆ ಮಾಡಲಾಗುವುದು. ಬಜೆಟ್ಗಾಗಿ ಎಲ್ಲಾ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ. ರೈತರಿಗೆ ಅನುಕೂಲವಾಗುವಂತಹ ಕೆಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು. ಪಿಎಲ್ಡಿ ಬ್ಯಾಂಕ್, ಸಹಕಾರಿ ಸಂಘಗಳು, ಕೆಸಿಸಿ ಬ್ಯಾಂಕ್ಗಳಲ್ಲಿ ಸಾಲ ಪಡೆದು ಮರುಪಾವತಿಸುವ ರೈತರಿಗೆ ಬಡ್ಡಿ ಮತ್ತು ಸುಸ್ತಿ ಬಡ್ಡಿಯನ್ನು ಮನ್ನಾ ಮಾಡಲಾಗುತ್ತಿದೆ. 400 ಕೋಟಿ ರೂ.ಗಳಿಗೂ ಅಧಿಕ ಆರ್ಥಿಕ ಹೊರೆಯಾಗುತ್ತದೆ. ರೈತರ ಸಾಲ ಮನ್ನಾ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ವಿಜಯ ನಗರ ಪ್ರತ್ಯೇಕ ಜಿಲ್ಲೆ ಕುರಿತು ನಾವು ಯಾವುದೇ ತೀರ್ಮಾನ ಮಾಡಿಲ್ಲ. ಆ ಬಗ್ಗೆ ವಿಚಾರ ಇಲ್ಲ ಎಂದು ಇದೇ ವೇಳೆ ಸಿಎಂ ಸ್ಪಷ್ಟಪಡಿಸಿದರು.