ಹುಬ್ಬಳ್ಳಿ: ಬಿಟ್ ಕಾಯಿನ್ ಹಗರಣ (bitcoin case) ವಿಚಾರದಲ್ಲಿ ಬಿಜೆಪಿ ನಾಯಕರ ಮೇಲೆ ಕಾಂಗ್ರೆಸ್ ನಾಯಕರು ಆಧಾರ ರಹಿತ ಆರೋಪ(congress leaders statements) ಮಾಡುವುದು ಸರಿಯಲ್ಲ. ಈ ರೀತಿ ಆಧಾರ ರಹಿತ ಆರೋಪ ಮಾಡುವುದರಿಂದ ಕಾಂಗ್ರೆಸ್ ಪಕ್ಷ (congress party) ಬೇಜವಾಬ್ದಾರಿ ರಾಜಕೀಯ ಪಕ್ಷ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್(jagadish shettar ) ಕಾಂಗ್ರೆಸ್ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾತನಾಡಿದ ಅವರು, ರಾಜಕಾರಣ(politics) ಸಲುವಾಗಿ ಈ ರೀತಿ ಆರೋಪ ಸರಿಯಲ್ಲ. ಸರಿಯಾದ ದಾಖಲೆಗಳಿದ್ದರೆ ಬಿಡುಗಡೆ ಮಾಡಿ. ಯಾರೋ ಮಾಡ್ತಾರೆ ಎನ್ನುವ ಸಲುವಾಗಿ, ಬೇಜವಾಬ್ದಾರಿ ಹೇಳಿಕೆ ನೀಡುವುದು ಸರಿಯಲ್ಲ.
ಚಾರ್ಜ್ ಶೀಟ್ನಲ್ಲಿ ಕಾಂಗ್ರೆಸ್ ನಾಯಕರ ಹೆಸರು?
ಈ ರೀತಿ ಆರೋಪ ಮಾಡೋದು, ರಾಜಕೀಯ ಪಕ್ಷಕ್ಕೆ ಒಳ್ಳೆಯದಲ್ಲ ಎಂದರು. ಚಾರ್ಜ್ ಶೀಟ್ನಲ್ಲಿ ಕಾಂಗ್ರೆಸ್ ನಾಯಕರ ಹೆಸರೇ ಬಂದಿದೆ. ಅದಕ್ಕೆ ನೀವು ಏನು ಉತ್ತರ ಕೊಡ್ತೀರಿ ಎಂದು ಕೈ ನಾಯಕರಿಗೆ ಶೆಟ್ಟರ್ ಪ್ರಶ್ನಿಸಿದರು.