ಹುಬ್ಬಳ್ಳಿ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಪುತ್ರ ಸಂಕಲ್ಪ ಶೆಟ್ಟರ್ ಹಾಗೂ ಎಂಎಲ್ಸಿ ಪ್ರದೀಪ್ ಶೆಟ್ಟರ್ ಮತದಾನ ಮಾಡಿದರು.
ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಮತದಾನ ಮಾಡಿದ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯ ಫಾತಿಮಾ ಸ್ಕೂಲ್ನ ಮತಗಟ್ಟೆ ಸಂಖ್ಯೆ-36ರಲ್ಲಿ ಮತದಾನದ ಬಳಿಕ ಮಾತನಾಡಿದ ಶೆಟ್ಟರ್, ಕೊರೊನಾದ ಸಂದರ್ಭದಲ್ಲಿಯೂ ಮತದಾರರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ನಾಲ್ಕು ಜಿಲ್ಲೆಗಳಲ್ಲೂ ಬಿಜೆಪಿ ಪರ ಅಲೆಯಿದೆ ಎಂದರು.
ಇನ್ನು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಹುಬ್ಬಳ್ಳಿಯ ಖಾಸಗಿ ಹೊಟೇಲ್ನಲ್ಲಿ ನಿನ್ನೆ ರಾತ್ರಿ ಬೆಳಗಾವಿ ಹಾಗೂ ಮಸ್ಕಿ ಕ್ಷೇತ್ರದ ಮುಖಂಡರ ಸಭೆ ನಡೆಸಿದ್ದೇವೆ. ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ, ಉಮೇಶ್ ಕತ್ತಿ, ರಮೇಶ್ ಕತ್ತಿ, ಲಕ್ಷ್ಮಣ ಸವದಿ ಭಾಗಿಯಾಗಿದ್ದರು. ಈ ವೇಳೆ ಬೆಳಗಾವಿ ಲೋಕಸಭೆ ಚುನಾವಣೆ, ಮಸ್ಕಿ ಕ್ಷೇತ್ರದ ಚುನಾವಣೆ ಮತ್ತು ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗಿದೆ. ಬೆಳಗಾವಿ ಲೋಕಸಭೆ ಅಭ್ಯರ್ಥಿ ಇನ್ನೂ ಅಂತಿಮವಾಗಿಲ್ಲ. ಕೆಲವೊಂದು ಸಮಸ್ಯೆ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದರು.
ಪ್ರಕಾಶ ಹುಕ್ಕೇರಿ ಬಿಜೆಪಿ ಬೆಂಬಲ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬೆಂಬಲ ನೀಡೋದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ಬಿಜೆಪಿ ಸೇರ್ಪಡೆ ಬಗ್ಗೆ ಅವರು ಎಲ್ಲಿಯೂ ಬಹಿರಂಗವಾಗಿ ಹೇಳಿಲ್ಲ. ಆ ಬಗ್ಗೆ ಚರ್ಚೆಯೂ ನಡೆದಿಲ್ಲ ಎಂದರು.