ಹುಬ್ಬಳ್ಳಿ:ನೇರೆಪಿಡಿತ ಪ್ರದೇಶಗಳ ವಸ್ತುಸ್ಥಿತಿ ತಿಳಿಯಲು ನಾನು ಹೋಗುತ್ತಿದ್ದೇವೆ. ಇಂದು ಧಾರವಾಡ ಮತ್ತು ನಾಳೆ ಕಾರವಾರ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತೇನೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಪ್ರವಾಹ ಪೀಡಿತ ಪ್ರದೇಶಗಳಿಗೆ ನೂತನ ಸಚಿವರ ಪಯಣ.. ಸಿಗುತ್ತಾ ಪರಿಹಾರ - Jagdish Shetter visiting flood aeea
ಬಿಜೆಪಿಯ ನೂತನ ಸರ್ಕಾರದಲ್ಲಿ ಜಗದೀಶ್ ಶೆಟ್ಟರ್ಗೆ ಸಚಿವ ಸ್ಥಾನ ದೊರೆತಿದ್ದು, ಹುಬ್ಬಳ್ಳಿಗೆ ಬಂದವರು ನಂತರ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಹೇಳಿದ್ದಾರೆ.

ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್
ಸಚಿರಾದ ಮೇಲೆ ಪ್ರಥಮ ಬಾರಿಗೆ ನಗರಕ್ಕೆ ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಮಾತನಾಡಿ, ನೆರೆಪೀಡಿತ ಪ್ರದೇಶ ವೀಕ್ಷಣೆ ಮಾಡಿ ಬಳಿಕ ಮುಖ್ಯಮಂತ್ರಿಗಳಿಗೆ ವರದಿ ನೀಡುತ್ತೇನೆ. ಯಾವುದೇ ಪರಿಹಾರ ಕಾರ್ಯಗಳು ನಿಂತಿಲ್ಲ. ಕೇಂದ್ರ ಸರ್ಕಾರ ಇನ್ನೂ ಹೆಚ್ಚಿನ ನೆರವು ನೀಡುವ ವಿಶ್ವಾಸವಿದೆ. ಯುದ್ದೋಪಾದಿಯಲ್ಲಿ ಪರಿಹಾರ ಕಾರ್ಯ ನಡೆಯುತ್ತಿದೆ ಎಂದರು.
ಖಾತೆ ಹಂಚಿಕೆ ವಿಚಾರದಲ್ಲಿ ಪಕ್ಷ ಮತ್ತು ವರಿಷ್ಠರು ಯಾವ ನಿರ್ಧಾರ ಮಾಡುತ್ತಾರೆ ಅದಕ್ಕೆ ನಾನು ಬದ್ದನಾಗಿರುತ್ತೇನೆ ಎಂದರು.