ಹುಬ್ಬಳ್ಳಿ: ಅಲ್ಪಸಂಖ್ಯಾತರ ಪಟ್ಟಿಯಲ್ಲಿರುವ ಜೈನರಿಗೆ ವಿಶೇಷ ಸೌಲಭ್ಯಗಳನ್ನು ನೀಡಬೇಕು ಎಂದು ಉತ್ತರ ಕರ್ನಾಟಕ ಜೈನ ಮಹಾ ಸಂಘದ ಅಧ್ಯಕ್ಷ ಬಿ.ಎ. ಪಾಟೀಲ್ ಒತ್ತಾಯಿಸಿದರು.
ಜೈನರಿಗೆ ವಿಶೇಷ ಸ್ಥಾನಮಾನ ನೀಡುವಂತೆ ಜೈನ ಮಹಾ ಸಂಘ ಆಗ್ರಹ - Jain Maha Sangha demands that Jains be given special status
ಹಲವು ಸಮಾಜಗಳು ಮೀಸಲಾತಿಗಳಾಗಿ ಪ್ರತಿಭಟನೆ ಮಾಡುತ್ತಿವೆ. ಆದ್ರೆ ಜೈನರು ಮೀಸಲಾತಿಗಾಗಿ ಹೋರಾಟ ಮಾಡುವುದಿಲ್ಲ, ಅವರು ಶಾಂತಿಪ್ರಿಯರು. ಹಾಗಾಗಿ ಸರ್ಕಾರ ಜೈನರಿಗೆ ವಿಶೇಷ ಸೌಲಭ್ಯಗಳನ್ನು ನೀಡಬೇಕು ಎಂದು ಉತ್ತರ ಕರ್ನಾಟಕ ಜೈನ ಮಹಾ ಸಂಘದ ಅಧ್ಯಕ್ಷ ಬಿ.ಎ.ಪಾಟೀಲ್ ಒತ್ತಾಯಿಸಿದರು.
ನಗರದಲ್ಲಿಂದು ಮಾತನಾಡಿದ ಅವರು, ಹಲವು ಸಮಾಜಗಳು ಮೀಸಲಾತಿಗಳಾಗಿ ಪ್ರತಿಭಟನೆ ಮಾಡುತ್ತಿವೆ. ಆದ್ರೆ ಜೈನರು ಮೀಸಲಾತಿಗಾಗಿ ಹೋರಾಟ ಮಾಡುವುದಿಲ್ಲ, ಅವರು ಶಾಂತಿಪ್ರಿಯರು. ಅಲ್ಪಸಂಖ್ಯಾತ ಪಟ್ಟಿಯಲ್ಲಿ ಮುಸ್ಲಿಂ, ಕ್ರೈಸ್ತ, ಬೌದ್ಧ, ಪಾರಸಿ, ಜೈನರನ್ನು ಸೇರ್ಪಡೆ ಮಾಡಲಾಗಿದೆ. ಅಲ್ಪಸಂಖ್ಯಾತರಿಗೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ನೀಡುವ ಸೌಲಭ್ಯಗಳಲ್ಲಿ ವಾರ್ಷಿಕ ಆದಾಯದ ಮಿತಿ ಹೇರಲಾಗಿದೆ. ಈ ಆದಾಯದ ಮಿತಿ ತೀರಾ ಕಡಿಮೆಯಿದ್ದು, ಬಹುತೇಕ ಜೈನರು ಈ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಜೈನ ಸಮುದಾಯ ವಂಚಿತವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ರು.
ಜೈನರಿಗಾಗಿ ರಾಜಕೀಯ ಮೀಸಲಾತಿ, ಸರ್ಕಾರಿ ಸ್ವಾಯತ್ತ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ನಾಮ ನಿರ್ದೇಶನ, ಕರ್ನಾಟಕ ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಆಗ್ರಹಿಸಿದರು.