ಹುಬ್ಬಳ್ಳಿ:ಕಳೆದ ನಾಲ್ಕು ತಿಂಗಳ ಹಿಂದೆ ಸುರಿದ ಭಾರಿ ಮಳೆಯಿಂದಾಗಿ ರಾಜ್ಯದ ಜನ ಅಕ್ಷರಶಃ ನರಕಯಾತನೆ ಅನುಭವಿಸುತ್ತಿದ್ದು, ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಆಗ್ರಹಿಸಿ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯ ವತಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಆಗ್ರಹ: ಸಿಎಂಗೆ ಮನವಿ ಸಲ್ಲಿಕೆ - ಹುಬ್ಬಳ್ಳಿ ಸಿಎಂಗೆ ಮನವಿ ಸಲ್ಲಿಕೆ ಸುದ್ದಿ
ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಆಗ್ರಹಿಸಿ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯು ಮುಖ್ಯಮಂತ್ರಿ ಯಡಿಯೂರಪ್ಪಗೆ ಮನವಿ ಸಲ್ಲಿಸಿದರು.

ಸಿಎಂಗೆ ಮನವಿ ಸಲ್ಲಿಕೆ
ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ವತಿಯಿಂದ ಸಿಎಂಗೆ ಮನವಿ
ರಾಜ್ಯದ ಅತಿವೃಷ್ಟಿಯಿಂದಾಗಿ ರೈತರಿಗೆ ಮಾತ್ರವಲ್ಲದೆ ಶಾಲಾ ಕಟ್ಟಡಗಳು ಹಾಳಾಗಿದ್ದು, ಸರಿಯಾದ ಅನುದಾನ ಸಮರ್ಪಕವಾಗಿ ಸಂತ್ರಸ್ತರಿಗೆ ದೊರೆಯುತ್ತಿಲ್ಲ. ಇದರ ಬಗ್ಗೆ ರಾಜ್ಯ ಸರ್ಕಾರ ಗಮನ ಹರಿಸಬೇಕು ಎಂದು ಆಗ್ರಹಿಸಿದರು. ಕಳಸಾ ಬಂಡೂರಿ ಮಹದಾಯಿ ನ್ಯಾಯಾಧೀಕರಣ ತೀರ್ಪು ಬಂದರೂ ಕೂಡ ಪ್ರಧಾನಿ ನರೇಂದ್ರ ಮೋದಿಯವರು ಕಾಮಗಾರಿಯ ಬಗ್ಗೆ ಚಿಂತನೆ ನಡೆಸಿಲ್ಲ. ಉತ್ತರ ಕರ್ನಾಟಕದ ಬಗ್ಗೆ ನಿಷ್ಕಾಳಜಿ ತೋರುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಸಿದ್ದು ತೇಜಿ, ಬಾಬಾಜಾನ ಮುದೋಳ, ಶೋಭಾ ಕಮತರ, ಶಿವು ಪಡೆಸೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.